ಕಲಬುರಗಿ: ಬಟ್ಟೆ ತೊಳೆಯಲು ಹೋಗಿದ್ದ ಒಬ್ಬ ಯುವತಿ ಹಾಗೂ ಬಾಲಕಿ ಕಾಲು ಜಾರಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಶಹಬಾದ್ ತಾಲೂಕಿನ ರಾಮಘಡ್ ಆಶ್ರಯ ಕಾಲೋನಿಯಲ್ಲಿ ಶುಕ್ರವಾರ ನಡೆದಿದೆ.
ಮಾಣಿಕಮ್ಮ ದಾಸರ್ (20), ಕೀರ್ತಿಕಾ (12) ಮೃತಪಟ್ಟವರು. ಮೃತರು ರಾಮಘಡ್ ಆಶ್ರಯ ಕಾಲೋನಿ ನಿವಾಸಿಗಳಾಗಿದ್ದಾರೆ. ಇಂದು ಮಧ್ಯಾಹ್ನ ಬಟ್ಟೆ ತೊಳೆಯಲು ಹೊಂಡಕ್ಕೆ ತೆರಳಿದಾಗ ಅವಘಡ ನಡೆದಿದೆ. ಹೆಣ್ಣು ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಕುರಿತು ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಓದಿ: ಮುಳುಗುತ್ತಿದ್ದ ತಮ್ಮನನ್ನು ರಕ್ಷಿಸಲು ಹೋದ ಮೂವರು ಸಹೋದರಿಯರೂ ನೀರುಪಾಲು!)