ಕಲಬುರಗಿ: ಸರ್ಕಾರ ಘೋಷಣೆ ಮಾಡಿರುವ ಸಂಡೇ ಕರ್ಫ್ಯೂಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇಂದು ಸಂಪೂರ್ಣ ಲಾಕ್ಡೌನ್ ಘೋಷಣೆ ಮಾಡಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ಇತರೆ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಲಾಕ್ಡೌನ್ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ಥಗಿತಗೊಂಡ ಪರಿಣಾಮ ಪ್ರಯಾಣಿಕರು ಪರದಾಡುವಂತಾಗಿತ್ತು.
ಪೊಲೀಸ್ ಬಿಗಿ ಭದ್ರತೆ:
ಅನಾವಶ್ಯಕವಾಗಿ ರೋಡಿಗಿಳಿಯುವವರನ್ನು ತಡೆಗಟ್ಟಲು ನಗರದಲ್ಲಿ ಪೊಲೀಸ್ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿತ್ತು. ಪೊಲೀಸ್ ಹೋಮ್ ಗಾರ್ಡ್ ಸೇರಿ ಸುಮಾರು 2 ಸಾವಿರ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.