ETV Bharat / state

ಪಿಎಸ್ಐ ಪರೀಕ್ಷಾ ಅಕ್ರಮ: ಜಾಮೀನಿನ ಮೇಲೆ ಹೊರಬಂದ ದಿವ್ಯಾ ಹಾಗರಗಿಗೆ ಭವ್ಯ ಸ್ವಾಗತ

9 ತಿಂಗಳ ಬಳಿಕ ಜೈಲಿನಿಂದ ಹೊರ ಬಂದ ದಿವ್ಯಾ ಹಾಗರಿಗಿ - ದಿವ್ಯಾ ಹಾರಗಿ ಸೇರಿ 26 ಮಂದಿಗೆ ಷರತ್ತುಬದ್ಧ ಜಾಮೀನು ನೀಡಿರುವ ಜಿಲ್ಲಾ ನ್ಯಾಯಾಲಯ- ಜೈಲಿನಿಂದ ಹೊರಬರುತ್ತಿದ್ದಂತೆ ಅದ್ಧೂರಿಯಾಗಿ ಸ್ವಾಗತಿಸಿದ ಕೆಲ ಬಿಜೆಪಿ ಉಚ್ಚಾಟಿತ ನಾಯಕರು - ಮನೆಮುಂದೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ

author img

By

Published : Jan 7, 2023, 8:08 PM IST

Grand welcome for Divya Hagargi
ಜಾಮೀನಿನ ಮೇಲೆ ಹೊರಬಂದ ದಿವ್ಯಾ ಹಾಗರಗಿಗೆ ಭವ್ಯ ಸ್ವಾಗತ

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕಿಂಗ್ ಪಿನ್ ದಿವ್ಯಾ ಹಾಗರಗಿ ಜಾಮೀನಿನ ಮೇಲೆ ಹೊರಬಂದಿದ್ದು, ಅದ್ಧೂರಿ ಸ್ವಾಗತ ಕೋರಲಾಯಿತು. ಶುಕ್ರವಾರ ರಾತ್ರಿ ಜೈಲಿನಿಂದ ಬಿಡುಗಡೆಯಾಗಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಪಿಎನ್‌ಟಿ ಕ್ರಾಸ್ ಬಳಿ ಇರುವ ಮ‌ನೆಗೆ ಆಗಮಿಸಿದ್ದಾರೆ‌. ದಿವ್ಯಾ ಹಾಗರಗಿ ಮನೆ ಮುಂದೆ ಬರುತ್ತಿದ್ದಂತೆ ಆಕಾಶದೆತ್ತರಕ್ಕೆ ಹಾರುವ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಲ್ಲದೆ, ಹಾರ ತೂರಾಯಿ ಹಾಕಿ ಅದ್ಧೂರಿಯಾಗಿ ಸ್ವಾಗತ ಕೋರಲಾಗಿದೆ‌. ದಿವ್ಯಾ ಹಾಗರಗಿ ಜೈಲಿನಿಂದ ಬಿಡುಗಡೆಯಾದ ಬಳಿಕ ಜೈಲಿನ ಬಳಿಯೇ ಕೆಲ ಬಿಜೆಪಿಯ ಉಚ್ಚಾಟಿತ ನಾಯಕರು ಸ್ವಾಗತ ಕೋರಿದರು.

ಬಳಿಕ ಮನೆ ಹತ್ತಿರ ದಿವ್ಯಾ ಹಾಗರಗಿ ಪತಿ ರಾಜೇಶ್ ಹಾಗರಗಿ ಮತ್ತು ಅಭಿಮಾನಿ ಬಳಗದವರು ಅದ್ಧೂರಿಯಾಗಿ ಬರಮಾಡಿಕೊಂಡರು. ಪಿಎಸ್ಐ ನೇಮಕಾತಿ ಅಕ್ರಮದಲ್ಲಿ 9 ತಿಂಗಳಿನಿಂದ ಜೈಲಿನಲ್ಲಿದ್ದ ದಿವ್ಯಾ ಹಾಗರಿಗಿ ಯನ್ನು ಜನವರಿ 5 ರಂದು ಕಲಬುರಗಿ ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ಅಂದು ದಿವ್ಯಾ ಹಾಗರಗಿ ಸೇರಿ 27 ಜನರನ್ನು ನ್ಯಾಯಾಲಯ ಷರತ್ತುಬದ್ದ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ 545 ಪಿಎಸ್​ಯ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದ ಹಿನ್ನೆಲೆ ಅಕ್ರಮದ ಕೇಂದ್ರ ಬಿಂದುವಾಗಿರುವ ದಿವ್ಯಾ ಹಾಗರಿಗಿ ವಿರುದ್ಧ 2022ರ ಏಪ್ರಿಲ್​ 10ರಂದು ಕಲಬುರಗಿಯ ಚೌಕ್​ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ಇದರ ಆಧಾರದಲ್ಲಿ ಪ್ರಮುಖ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರ ಮನೆಗೆ ಸಿಐಡಿ ದಾಳಿ ಮಾಡಿತ್ತು.

ಅದರಲ್ಲೂ ದಿವ್ಯಾ ಹಾಗರಗಿ ಅವರಿಗೆ ಸೇರಿದ, ಅವರು ಅಧ್ಯಕ್ಷೆ ಆಗಿರುವ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಅಕ್ರಮ ನಡೆದಿತ್ತು. ಶಾಲೆಯಲ್ಲಿ ಪರೀಕ್ಷಾ ಅಕ್ರಮಕ್ಕೆ ಸಹಕರಿಸಿದ್ದ ಇತರ ಆರೋಪಿಗಳನ್ನು ಬಂಧಿಸಲಾಗಿದ್ದರೂ, ದಿವ್ಯಾ ಹಾಗರಗಿ ನಾಪತ್ತೆಯಾಗಿದ್ದರು. ಅವರ ಪತಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಮನೆ ಪರಿಶೀಲನೆ ವೇಳೆ ಅಕ್ರಮಕ್ಕೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ಸಿಐಡಿ ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ: ಪಿಎಸ್ಐ ನೇಮಕಾತಿ ಹಗರಣ: ಜಾಮೀನು ಕೋರಿ ದಿವ್ಯಾ ಹಾಗರಗಿ ಅರ್ಜಿ, ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಸಿಐಡಿ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ದಿವ್ಯಾ ಹಾಗರಗಿ ಸೇರಿ ಇತರ ಆರು ಆರೋಪಿಗಳಿಗೆ ನ್ಯಾಯಾಲಯ ಅರೆಸ್ಟ್​ ವಾರಂಟ್​​ ಜಾರಿ ಮಾಡಿತ್ತು. ಇದಾದ ಬಳಿಕ ಪಿಎಸ್​ಐ ಅಕ್ರಮ ಪ್ರಕರಣ ಬೆಳಕಿಗೆ ಬಂದಂದಿನಿಂದ 18 ದಿನಗಳ ಕಾಲ ತಲೆಮರೆಸಿಕೊಂಡಿದ್ದ ದಿವ್ಯಾ ಹಾಗರಗಿ ಹಾಗೂ ಇತರ ಐವರು ಆರೋಪಿಗಳನ್ನು ಸಿಐಡಿ ಎಪ್ರಿಲ್​ 28ರಂದು ತಡರಾತ್ರಿ ಪುಣೆಯಲ್ಲಿ ಬಂಧಿಸಿದ್ದರು. ಈ ವೇಳೆ, ತಾವು ಬಳಸುತ್ತಿದ್ದ ಮೊಬೈಲ್​ನ್ನು ಒಡೆದು ಹಾಕಿ ಸಾಕ್ಷ್ಯ ನಾಶ ಮಾಡಿದ್ದರು.

11 ದಿನಗಳ ಕಾಲ ಸಿಐಡಿ ಕಸ್ಟಡಿಯಲ್ಲಿದ್ದ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಮೇ 9ರಂದು ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ದಿವ್ಯಾ ಹಾಗರಗಿ ಕೆಲವು ಬಾರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಜೈಲು ಪಾಲಾಗಿದ್ದ ಬಿಜೆಪಿ ಮುಖಂಡ, ದಿವ್ಯಾ ಹಾಗರಗಿ ಪತಿ ರಾಜೇಶ್​ಗೆ ಐದೂವರೆ ತಿಂಗಳ ನಂತರ ಹಲವು ಷರತ್ತು ವಿಧಿಸಿ ಸೆಪ್ಟೆಂಬರ್​ ಅಂತ್ಯದಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಹಲವು ಬಾರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದರೂ ದಿವ್ಯಾ ಹಾಗರಗಿ ಮತ್ತೆ ಡಿಸೆಂಬರ್​ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯ ದಿವ್ಯಾ ಹಾಗರಗಿ ಸೇರಿದಂತೆ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿದ್ದ 26 ಆರೋಪಿಗಳಿಗೆ ಗುರುವಾರ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿತ್ತು. ಇದೀಗ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿ ಬಂದಿರುವ ದಿವ್ಯಾ ಹಾಗರಗಿ ಅವರಿಗೆ ಅವರ ಊರಿನಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ.

ಇದನ್ನೂ ಓದಿ: ಪಿಎಸ್ಐ ಪರೀಕ್ಷೆ ಅಕ್ರಮ: ದಿವ್ಯಾ ಹಾಗರಗಿ ಸೇರಿ ಒಟ್ಟು 26 ಆರೋಪಿಗಳಿಗೆ ಜಾಮೀನು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.