ಕಲಬುರಗಿ: ಹಡಪದ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕಲಬುರಗಿಯಲ್ಲಿ ವಿನೂತನವಾಗಿ ಪ್ರತಿಭಟಿಸಲಾಯಿತು. ಅಖಿಲ ಕರ್ನಾಟಕ ಹಡಪದ ಸಮಾಜದ ವತಿಯಿಂದ ಸರ್ದಾರ್ ವಲ್ಲಭ ಭಾಯಿ ಪಟೇಲ್ ವೃತ್ತದಿಂದ, ಜಿಲ್ಲಾಧಿಕಾರಿ ಕಚೇರಿವರೆಗೂ ದೀರ್ಘ ದಂಡ ನಮಸ್ಕಾರ ಹಾಕಲಾಯಿತು.
ಹಡಪದ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಮಂಡಳಿ, ಗ್ರಾಮೀಣ ಭಾಗದಲ್ಲಿ ಕ್ಷೌರ ಕುಟೀರ ಸ್ಥಾಪನೆ, ಹಡಪದ ಸಮಾಜವನ್ನು ಪರಿಶಿಷ್ಟ ಪಂಗಡ ಅಥವಾ ಪ್ರವರ್ಗ-1 ಕ್ಕೆ ಸೇರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಲಾಯಿತು. ಕೂಡಲೇ ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಹೋರಾಟಗಾರರು ಎಚ್ಚರಿಕೆ ನೀಡಿದರು.