ETV Bharat / state

ಕಲಬುರಗಿಯಲ್ಲಿ ಹಲವು ಮೈಲುಗಲ್ಲುಗಳಿಗೆ ಸಾಕ್ಷಿಯಾದ ಸಂತಸವಿದೆ: ಶರತ್​ ಬಿ - ಕಲಬುರಗಿ ಜಿಲ್ಲಾಧಿಕಾರಿ ಶರತ್​ ಬಿ ವರ್ಗಾವಣೆ

ಕಲಬುರಗಿಯ ಎಲ್ಲಾ ನಾಗರಿಕರು ಮತ್ತು ಸಾರ್ವಜನಿಕರಿಗೆ, ಅಧಿಕಾರವಧಿಯಲ್ಲಿ ಸಹಾಯ ಮಾಡಿದ ಎಲ್ಲ ಸರ್ಕಾರಿ ಅಧಿಕಾರಿಗಳು, ಡಿಸಿ ಕಚೇರಿ ಮತ್ತು ಎಲ್ಲಾ ಇಲಾಖೆಯ ಸಿಬ್ಬಂದಿಗೆ ವರ್ಗಾವಣೆಗೊಂಡಿರುವ ಜಿಲ್ಲಾಧಿಕಾರಿ ಶರತ್ ಬಿ. ಅವರು ಹೃತ್ಪೂರ್ವಕ ಧನ್ಯವಾದ ತಿಳಿಸಿದರು.

happy-with-witnessing-many-milestones-in-kalabhuri-sarath-b
ಶರತ್​ ಬಿ
author img

By

Published : Aug 29, 2020, 3:43 AM IST

ಕಲಬುರಗಿ: ಅಲ್ಪಾವಧಿ ಅಧಿಕಾರದಲ್ಲಿ ಹಲವು ಸವಾಲುಗಳನ್ನು ಎದುರಿಸಿದ್ದೇನೆ. ಅಲ್ಲದೆ ಹಲವಾರು ಪ್ರಮುಖ ಮೈಲುಗಲ್ಲುಗಳಿಗೆ ಸಾಕ್ಷಿಯಾಗಿದ್ದೇನೆ ಎಂದು ವರ್ಗಾವಣೆಗೊಂಡಿರುವ ಜಿಲ್ಲಾಧಿಕಾರಿ ಶರತ್ ಬಿ. ಹೇಳಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶರತ್ ಬಿ.​, 2019 ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ, ನವೆಂಬರ್​ನಲ್ಲಿ ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆ, ಫೆಬ್ರವರಿ 5, 6 ಮತ್ತು 7 ಮೂರು ದಿನಗಳ ಕಾಲ ನಡೆದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಂತಹ ಮೈಲಿಗಲ್ಲುಗಳಿಗೆ ಸಾಕ್ಷಿಯಾಗಿದ್ದು, 2020ರ ಮಾರ್ಚ್ 13ರಿಂದ ಕೋವಿಡ್-19 ರ ವಿರುದ್ಧ ಹೋರಾಟ ಮಾಡಿದ್ದನ್ನು ಸ್ಮರಿಸಿದ್ದಾರೆ‌.

ಮಾಜಿ ಸಂಸದ ಬಸವರಾಜ್ ಪಾಟೀಲ್ ಸೇಡಂ ಅವರಂತಹ ಮಹಾನ್ ವ್ಯಕ್ತಿಗಳೊಂದಿಗೆ ಕೆಲಸ ಮಾಡಿ ಉತ್ತಮ ಕಲಿಕೆಯ ಅನುಭವ ಸಿಕ್ಕಿದೆ. ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು ಬೆಂಬಲ ಮತ್ತು ಸಹಕಾರ ನೀಡಿದ್ದಕ್ಕೆ ಧನ್ಯವಾದಗಳು. ಎಲ್ಲಾ ನಾಗರಿಕರು ಮತ್ತು ಸಾರ್ವಜನಿಕರಿಗೆ, ಅಧಿಕಾರವಧಿಯಲ್ಲಿ ಸಹಾಯ ಮಾಡಿದ ಎಲ್ಲ ಸರ್ಕಾರಿ ಅಧಿಕಾರಿಗಳು, ಡಿಸಿ ಕಚೇರಿ ಮತ್ತು ಎಲ್ಲಾ ಇಲಾಖೆಯ ಸಿಬ್ಬಂದಿಗೆ ಶರತ್ ಬಿ. ಅವರು ಹೃತ್ಪೂರ್ವಕ ಧನ್ಯವಾದ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.