ಕಲಬುರಗಿ: ಕಾಂಗ್ರೆಸ್ ನಾಯಕರ ಮನೆ, ಕಚೇರಿಗಳ ಮೇಲೆ ಐಟಿ ದಾಳಿ ಮಾಡುವ ಮೂಲಕ ದೇಶದಲ್ಲಿ ದ್ವೇಷದ ರಾಜಕಾರಣ ನಡೆಯುತಿದೆ ಎಂದು ಎಐಸಿಸಿ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೇರೆ ಬೇರೆ ಕಡೆ ಚುನಾವಣೆ ಹಿನ್ನೆಲೆ ಐಟಿ ದಾಳಿ ಮಾಡಲಾಗುತ್ತಿದೆ. ಆದಾಯ ತೆರಿಗೆ ಕಟ್ಟಿಲ್ಲ ಅಂದ್ರೆ ನೋಟಿಸ್ ಕೊಟ್ಟು ಅವರಿಗೆ ವಾರ್ನ್ ಮಾಡಬೇಕು. ಬದಲಾಗಿ ಅನಗತ್ಯವಾಗಿ ರೆಡ್ ಹೆಸರಿನಲ್ಲಿ ವಿರೋಧ ಪಕ್ಷದ ನಾಯಕರಿಗೆ ಬೆದರಿಕೆ ಕರೆ ಮಾಡಿ ಹೆದರಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಈ ರೀತಿಯ ಘಟನೆಗಳು ದೇಶಕ್ಕೆ, ಪ್ರಜಾಪ್ರಭುತ್ವಕ್ಕೆ ಮಾರಕವಾಗಲಿದೆ ಎಂದರು.
ರಾಜಕೀಯ ನಾಯಕರ ಮೇಲೆ ಐಟಿ ದಾಳಿ ಮಾಡಬಾರದು. ತಪ್ಪು ಮಾಡಿದ್ರೆ ಕಾನೂನಿನ ಪ್ರಕಾರ ಕ್ರಮ ಜರುಗಿಸಬೇಕು. ಉದ್ದೇಶ ಪೂರ್ವಕವಾಗಿ ದಾಳಿ ಮಾಡೋದು ಸರಿಯಲ್ಲ, ಕೇಂದ್ರ ಸರ್ಕಾರ ಪದೇ ಪದೇ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಆ ಮೂಲಕ ವಿರೋಧ ಪಕ್ಷಗಳನ್ನು ಹತ್ತಿಕ್ಕಲು ಯತ್ನಿಸುತ್ತಿದೆ. ಇಂತಹ ರಾಜಕೀಯ ಪ್ರೇರಿತ ದಾಳಿಗಳನ್ನು ಕೂಡಲೇ ನಿಲ್ಲಿಸಬೇಕು ಎಂದು ಕಲಬುರಗಿಯಲ್ಲಿ ಖರ್ಗೆ ಆಗ್ರಹಿಸಿದರು.