ETV Bharat / state

ಸಿದ್ದರಾಮಯ್ಯ ಭಾಷಣದುದ್ದಕ್ಕೂ ಮೊಳಗಿದ 'ಹೌದು ಹುಲಿಯಾ', 'ಮೋದಿ..ಮೋದಿ..' ಘೋಷಣೆ

ಕಲಬುರಗಿಯಲ್ಲಿ ನಡೆಯುತ್ತಿರುವ ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಷಣ ಪ್ರಾರಂಭಿಸುತ್ತಿದ್ದಂತೆ ಹೌದು ಹುಲಿಯಾ ಹಾಗೂ ಮೋದಿ ಮೋದಿ ಘೋಷಣೆ ಕೂಗಿದ ಪ್ರಸಂಗ ನಡೆಯಿತು.

author img

By

Published : Feb 7, 2020, 11:24 PM IST

Haudu Hulia, Modi-Modi slogan throughout Siddaramaiah's speech
ಸಿದ್ದರಾಮಯ್ಯ ಭಾಷಣದುದ್ದಕ್ಕೂ ಮೊಳಗಿದ ಹೌದು ಹುಲಿಯಾ, ಮೋದಿ ಮೋದಿ ಘೋಷಣೆ

ಕಲಬುರಗಿ: ಕಲಬುರಗಿಯಲ್ಲಿ ನಡೆಯುತ್ತಿರುವ ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಷಣ ಪ್ರಾರಂಭಿಸುತ್ತಿದ್ದಂತೆ 'ಹೌದು ಹುಲಿಯಾ ಹಾಗೂ ಮೋದಿ ಮೋದಿ' ಘೋಷಣೆ ಕೂಗಿದ ಪ್ರಸಂಗ ನಡೆಯಿತು.

ಗುಲ್ಬರ್ಗಾ ವಿಶ್ವವಿದ್ಯಾಲಯ ಕಲಬುರ್ಗಿಯಲ್ಲಿ ಆವರಣದಲ್ಲಿ ಜರುಗಿದ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮೂರನೇ ದಿನವಾದ ಇಂದು ಸಮಾರೋಪ ಕಾರ್ಯಕ್ರಮ ಜರುಗಿತು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಪ್ರಾರಂಭಿಸುತ್ತಿದ್ದಂತೆ ಹೌದು ಹುಲಿಯಾ ಘೋಷಣೆ ಒಂದು ಕಡೆಯಾದರೆ ಮತ್ತೊಂದೆಡೆ ಮೋದಿ, ಮೋದಿ ಘೋಷಣೆ ಪ್ರತಿಧ್ವನಿಸಿದವು. ಭಾಷಣದುದ್ದಕ್ಕೂ ಹೌದು ಹುಲಿಯಾ ಹಾಗೂ ಮೋದಿ, ಮೋದಿ ಎಂಬ ಘೋಷಣೆಗಳು ಜೋರಾಗಿತ್ತು. ಆದ್ರೆ ಇದ್ಯಾವುದಕ್ಕೂ ಲೆಕ್ಕಿಸದೆ ಸಿದ್ದರಾಮಯ್ಯ ಅವರು ತಮ್ಮ ಭಾಷಣವನ್ನು ಮುಂದುವರಿಸಿದರು.

ಈ ವೇಳೆ ವೇದಿಕೆ ಮೇಲೆ ಸಮ್ಮೇಳನ ಸರ್ವಾಧ್ಯಕ್ಷರಾದ ಹೆಚ್.ಎಸ್‌.ವೆಂಕಟೇಶಮೂರ್ತಿ, ಕ.ಸಾ.ಪ ರಾಜ್ಯಾಧ್ಯಕ್ಷ ಮನು ಬಳಿಗಾರ್ ಸೇರಿದಂತೆ ಅನೇಕ ರಾಜಕೀಯ ಮುಖಂಡರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.