ಕಲಬುರಗಿ: ಜಿಲ್ಲೆಯಲ್ಲಿ ಗುಡುಗು ಸಿಡಿಲುಸಹಿತ ಧಾರಾಕಾರ ಅಕಾಲಿಕ ಮಳೆ ಸುರಿದಿದೆ. ಸಿಡಿಲಿಗೆ ಓರ್ವ ಮಹಿಳೆ ಬಲಿಯಾಗಿದ್ದಾರೆ. ಚಿಂಚೋಳಿ ತಾಲೂಕಿನ ಶಿವರೆಡ್ಡಿಪಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ನಾಗಮಣಿ ಜೋಗ್ (30) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ನಾಗಮಣಿ ಸಾವಿಗೀಡಾಗಿದ್ದಾರೆ. ಇವರ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಇನ್ನೂ ಇಬ್ಬರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಇಬ್ಬರು ಬಾಲಕಿಯರ ಬದುಕಲ್ಲಿ ವಿಧಿಯ 'ಕಣ್ಣಾಮುಚ್ಚಾಲೆ': ಐಸ್‌ಕ್ರೀಂ ಬಾಕ್ಸ್‌ನಲ್ಲೇ ಉಸಿರುಗಟ್ಟಿ ಸಾವು!