ಕಲಬುರಗಿ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನಗರ ಪ್ರದೇಶ ಸೇರಿದಂತೆ ಜಿಲ್ಲೆಯ ಹಲವೆಡೆ ಕಳೆದ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದೆ.
ನಿರಂತರ ಮಳೆಯಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿನ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನ ತುಸು ಅಸ್ತವ್ಯಸ್ತಗೊಂಡಿದೆ. ಹಲವೆಡೆ ಜಮೀನುಗಳಿಗೆ ನೀರು ನುಗ್ಗಿ, ಅನೇಕ ಬೆಳೆಗಳು ಜಲಾವೃತಗೊಂಡಿವೆ.
ಕಮಲಾಪುರ ತಾಲೂಕಿನ ಓಕಳಿ ಮತ್ತಿತರೆಡೆ ಜಮೀನುಗಳಿಗೆ ನೀರು ನುಗ್ಗಿದ್ದು, ಕಳೆದ ಕೆಲ ದಿನಗಳ ಹಿಂದಷ್ಟೇ ಬಿತ್ತನೆ ಮಾಡಲಾಗಿದ್ದ ತೊಗರಿ, ಹೆಸರು, ಉದ್ದು, ಎಳ್ಳು ಇತ್ಯಾದಿ ಬೆಳೆಗಳು ಕೊಚ್ಚಿ ಹೋಗಿವೆ.