ಕಲಬುರಗಿ: ಕೆಲದಿನಗಳು ವಿರಾಮ ನೀಡಿದ್ದ ವರುಣ ನಗರದಲ್ಲಿ ಮತ್ತೆ ಅಬ್ಬರಿಸಿದ್ದಾನೆ.
ನಗರದಲ್ಲಿ ಧಾರಾಕಾರ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಗರ ಸೇರಿ ಜಿಲ್ಲೆಯ ಹಲವೆಡೆ ಭಾರೀ ಮಳೆಯಾದ ಪರಿಣಾಮ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿದೆ.
ನಗರದ ವಿಶ್ವಾರಾಧ್ಯ ಕಾಲೋನಿಯಲ್ಲಿನ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿದ್ದ ಕೆಲವು ವಸ್ತುಗಳು ಮಳೆ ನೀರಲ್ಲಿ ಕೊಚ್ಚಿಹೋಗಿವೆ.