ಕಲಬುರಗಿ: ಜಿಲ್ಲೆಯಲ್ಲಿ ಇನ್ನೆರಡು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆ ಸೋಮವಾರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಯಶವಂತ ಗುರುಕರ್ ಆದೇಶ ಹೊರಡಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನಾಳೆ ಹಾಗೂ ನಾಡಿದ್ದು ಎರಡು ದಿನವು ಮಳೆ ಮುಂದುವರೆಯುವ ಸಾದ್ಯತೆ ಇದೆ.
ಹವಾಮಾನ ಇಲಾಖೆ ಕಲಬುರಗಿ ಜಿಲ್ಲೆಯಲ್ಲಿ ಯೆಲ್ಲೋ ಹಾಗೂ ರೆಡ್ ಅಲಟ್೯ ಘೋಷಣೆ ಮಾಡಿದೆ. ಮಳೆಯಿಂದಾಗಿ ಮಕ್ಕಳಿಗೆ ಸಮಸ್ಯೆಯಾಗದಿರಲಿ ಎಂಬ ಕಾರಣಕ್ಕಾಗಿ ಸೋಮವಾರ ಮತ್ತೆ ಒಂದು ದಿನ ಅಂಗನವಾಡಿ ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಯಶವಂತ ಗುರುಕರ್ ರಜೆ ಘೋಷಣೆ ಮಾಡಿದ್ದಾರೆ. ಶನಿವಾರ ಶಾಲೆ -ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ಇದೀಗ ಮತ್ತೆ ಸೋಮವಾರ ಸಹ ರಜೆ ಘೋಷಿಸಿ ಆದೇಶವನ್ನು ಹೊರಡಿಸಲಾಗಿದೆ.
ಇದನ್ನೂ ಓದಿ: ಕಬಿನಿ ಜಲಾಶಯ ತುಂಬಲು ಎರಡೇ ಅಡಿ ಬಾಕಿ... ನದಿ ಪಾತ್ರದ ಜನರಲ್ಲಿ ಭೀತಿ