ಕಲಬುರಗಿ : ಈಟಿವಿ ಭಾರತ್ ವರದಿಯಿಂದ ಎಚ್ಚೆತ್ತ ಕಲಬುರಗಿ ಜಿಲ್ಲಾಡಳಿತ ಜಿಲ್ಲೆಯ ಖಜೂರಿ ಸೇರಿ ಐದು ಕಡೆ ಚೆಕ್ಪೋಸ್ಟ್ನಲ್ಲಿ ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸಿದೆ.
ಕೊರೊನಾ ರೂಪಾಂತರಿ 'ಓಮಿಕ್ರಾನ್' ಆತಂಕದ ಹಿನ್ನೆಲೆ ರಾಜ್ಯದ ಎಲ್ಲ ಗಡಿಜಿಲ್ಲೆಗಳಲ್ಲಿ ಕಟ್ಟೆಚ್ಚರವಹಿಸುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ಆದರೆ, ಕಲಬುರಗಿ ಗಡಿಯಲ್ಲಿ ಹೆಸರಿಗೆ ಮಾತ್ರ ಚೆಕ್ಪೋಸ್ಟ್ ನಿರ್ಮಾಣ ಮಾಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು.
ಈ ಕುರಿತು ಈಟಿವಿ ಭಾರತ್ 'ಇದು ಹೆಸರಿಗೆ ಮಾತ್ರ 'ಚೆಕ್ಪೋಸ್ಟ್'.. ಇಲ್ಲಿ ಹೇಳೋರು, ಕೇಳೋರು ಯಾರೂ ಇಲ್ಲ!' ಎಂಬ ಶೀರ್ಷಿಕೆ ಅಡಿ ವಿಸ್ತೃತ ವರದಿಯನ್ನು ಬಿತ್ತರಿಸಿತ್ತು. ಈ ವರದಿಯನ್ನು ಕಂಡ ಜಿಲ್ಲಾಡಳಿತ ತಕ್ಷಣವೇ ಎಚ್ಚೆತ್ತುಕೊಂಡು ಸಿಬ್ಬಂದಿ ನಿಯೋಜನೆ ಮಾಡಿದೆ.
ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಪ್ರತಿಯೊಂದು ವಾಹನಗಳನ್ನು ಕಲಬುರಗಿ ಗಡಿಯಲ್ಲಿ ನಿರ್ಮಿಸಲಾಗಿರುವ ಚೆಕ್ಪೋಸ್ಟ್ನಲ್ಲಿ ತಪಾಸಣೆ ನಡೆಸಲಾಗುತ್ತಿದೆ. ವ್ಯಾಕ್ಸಿನ್ ರಿಪೋರ್ಟ್, ಆರ್ಟಿಪಿಸಿಆರ್ ನೆಗೆಟಿವ್ ವರದಿ ಇದ್ರೆ ಮಾತ್ರ ಜಿಲ್ಲೆಗೆ ಪ್ರವೇಶ ಕಲ್ಪಿಸಲಾಗುತ್ತಿದೆ. ಇಲ್ಲದೆ ಹೋದರೆ, ಗಡಿಯಿಂದ ವಾಪಸ್ ಕಳುಹಿಸಲಾಗುತ್ತಿದೆ.
ಓದಿ: ಇದು ಹೆಸರಿಗೆ ಮಾತ್ರ 'ಚೆಕ್ಪೋಸ್ಟ್'.. ಇಲ್ಲಿ ಹೇಳೋರು, ಕೇಳೋರು ಯಾರೂ ಇಲ್ಲ!