ETV Bharat / state

ಆಳಂದ ದರ್ಗಾದಲ್ಲಿ ಶಿವಲಿಂಗ ಪೂಜೆ ವಿಚಾರ: ಟ್ರಿಬುನಲ್ ಕೋರ್ಟ್ ಆದೇಶ ಎತ್ತಿಹಿಡಿದ ಹೈಕೋರ್ಟ್

ಆಳಂದ ಪಟ್ಟಣದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸುವ ವಿಚಾರ ಸಂಬಂಧ ವಕ್ಫ್​​ ಟ್ರಿಬುನಲ್ ಕೋರ್ಟ್​ ನೀಡಿದ್ದ ಆದೇಶವನ್ನು ಹೈಕೋರ್ಟ್​​ ಪೀಠ ಎತ್ತಿ ಹಿಡಿದಿದೆ.

high-court-upholds-tribunal-court-order-in-aland-dargah-issue
aland dargah shivaling pooja issue
author img

By

Published : Feb 17, 2023, 6:23 PM IST

Updated : Feb 17, 2023, 7:49 PM IST

ಆದೇಶದ ಬಗ್ಗೆ ಹೈಕೋರ್ಟ್ ವಕೀಲರಾದ ಜಯಾನಂದಯ್ಯ ಸ್ವಾಮಿ ಮಾಹಿತಿ

ಕಲಬುರಗಿ: ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸುವ ವಿಚಾರದಲ್ಲಿ ದರ್ಗಾ ಕಮಿಟಿಗೆ ಹೈಕೋರ್ಟ್​ನಲ್ಲಿ ಹಿನ್ನಡೆ ಆಗಿದೆ. ದರ್ಗಾದಲ್ಲಿನ ಶಿವಲಿಂಗಕ್ಕೆ ಪೂಜೆ ಮಾಡಲು ವಕ್ಫ್​​ ಟ್ರಿಬುನಲ್ ಕೋರ್ಟ್​ ನೀಡಿದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಸಂಬಂಧ ಟ್ರಿಬುನಲ್ ಕೋರ್ಟ್ ಆದೇಶವನ್ನು ಕಲಬುರಗಿ ಹೈಕೋರ್ಟ್ ಪೀಠ ಎತ್ತಿ ಹಿಡಿದಿದೆ.

ಮಹಾಶಿವರಾತ್ರಿಯಂದೇ ದರ್ಗಾದ ಉರುಸ್ ಇದ್ದು ಬೆಳಿಗ್ಗೆ 8 ಗಂಟೆಯಿಂದ 12 ಗಂಟೆವರೆಗೆ 15 ಜನ ಮುಸ್ಲಿಮರು ತೆರಳಿ ದರ್ಗಾಕ್ಕೆ ಪೂಜೆ ಸಲ್ಲಿಸಬೇಕು. ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ 15 ಜನ ಹಿಂದೂಗಳು ತೆರಳಿ ಶಿವಲಿಂಗ ಪೂಜೆ ನೆರವೇರಿಸುವಂತೆ ಕಳೆದ ನಾಲ್ಕು ದಿನಗಳ ಹಿಂದೆ ಕಲಬುರಗಿ ವಕ್ಫ್ ಟ್ರಿಬುನಲ್ ಕೋರ್ಟ್ ಆದೇಶಿಸಿತ್ತು.

ಶಿವರಾತ್ರಿಗೆ ಕೇವಲ ಎರಡು ದಿನವಿರುವಾಗಲೇ ವಕ್ಫ್ ಟ್ರಿಬುನಲ್ ಕೋರ್ಟ್ ಆದೇಶ ಪ್ರಶ್ನಿಸಿ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ನೀಡಬಾರದೆಂದು ದರ್ಗಾ ಕಮಿಟಿಯಿಂದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಜೆ.ಎಮ್.ಖಾಜಿ ನೇತೃತ್ವದ ಹೈಕೋರ್ಟ್ ಪೀಠ ವಕ್ಫ್ ಟ್ರಿಬುನಲ್ ಕೋರ್ಟ್ ಆದೇಶ ಪಾಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಅಲ್ಲದೆ ಆರು ಗಂಟೆ ನಂತರ ದರ್ಗಾಕ್ಕೆ ಯಾರೂ ಹೋಗಬಾರದು, ಜಿಲ್ಲಾಧಿಕಾರಿ ವಾರಕ್ಕೊಮ್ಮೆ ಅಲ್ಲಿ ಸ್ವಚ್ಚತೆ ಕಾರ್ಯಕ್ಕೆ ಓರ್ವರನ್ನು ನಿಯೋಜಿಸಬೇಕು ಎಂಬ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.‌ ಹೈಕೋರ್ಟ್ ನೀಡಿರುವ ತೀರ್ಪಿನ ಪ್ರಕಾರ ನಾಳೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ ದರ್ಗಾದಲ್ಲಿನ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲಾಗುತ್ತದೆ.

ವಕ್ಫ್ ಬೋರ್ಡ್ ಟ್ರಿಬುನಲ್ ಕೋರ್ಟ್ ಆದೇಶ ಪ್ರಶ್ನಿಸಿ ಕಲಬುರಗಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಎರಡೂ ಸಮುದಾಯವರಿಗೆ ಅನುಕೂಲವಾಗಲೆಂದು ಉರುಸ್ ಮತ್ತು ಶಿವಲಿಂಗ ಪೂಜೆ ಶಾಂತಿಯುತವಾಗಿ ನಡೆಸಿಕೊಂಡು ಹೋಗಲು ಅವಕಾಶ ಕಲ್ಪಿಸಿತ್ತು.

ಸದ್ಯ ಹೈಕೋರ್ಟ್ ತೀರ್ಪಿನ ಬಳಿಕ ಆಳಂದ ಪಟ್ಟಣದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ನಿನ್ನೆಯಷ್ಟೇ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್‌ಕುಮಾರ್, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಆಳಂದ ಪಟ್ಟಣದಲ್ಲಿ ರೂಟ್ ಮಾರ್ಚ್ ನಡೆಸಿದ್ದರು. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮತ್ತು ಪೊಲೀಸರೊಂದಿಗೆ ಸಹಕರಿಸಬೇಕೆಂದು ಸ್ಥಳೀಯರಲ್ಲಿ ಮನವಿ ಮಾಡಿಕೊಂಡಿದ್ದರು.

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ, ಕೇಂದ್ರ ಸಚಿವ ಭಗವಂತ ಖೂಬಾ, ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್, ಶಾಸಕರಾದ ಬಸವರಾಜ್ ಮತ್ತಿಮೂಡ್, ರಾಜಕುಮಾರ ಪಾಟೀಲ್ ತೆಲ್ಕೂರ್ ಸೇರಿದಂತೆ ಒಟ್ಟು 15 ಜನ ನಾಳೆ ದರ್ಗಾಕ್ಕೆ ತೆರಳಿ ಪುರಾತನ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಪೊಲೀಸ್ ಭದ್ರತೆಯಲ್ಲಿ ಆಳಂದ ದರ್ಗಾದಲ್ಲಿ ಸಂದಲ್ ಶಿವಲಿಂಗ ಪೂಜೆ ಎಸ್​ಪಿ ಇಶಾ ಪಂತ್

Last Updated : Feb 17, 2023, 7:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.