ಕಲಬುರಗಿ: ಪ್ರಾಣಿ ಬಲಿ ನಿಷೇಧ ಕಾಯ್ದೆ ಪರಿಣಾಮಕಾರಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಿಂದೂ ರಕ್ಷಕ ಶಿವಾಜಿ ಬ್ರಿಗೇಡ್ ಸಂಘಟನೆ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು, ನಗರದಲ್ಲಿ ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ಘೋಷಣೆ ಕೂಗಿದರು. ನಗರದ ಹಲವೆಡೆ ಅಕ್ರಮವಾಗಿ ನಡೆಯುತ್ತಿರುವ ಕಸಾಯಿಖಾನೆ ಬಂದ್ ಮಾಡಿಸಬೇಕು. ರಾಜ್ಯಾದ್ಯಂತ ಸಂಪೂರ್ಣ ಗೋಹತ್ಯೆ ನಿಷೇಧ ಜಾರಿಗೆ ತರಬೇಕೆಂದು ಆಗ್ರಹಿಸಿ, ಜಿಲ್ಲಾಧಿಕಾರಿ ಮುಖೇನ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.