ETV Bharat / state

ಮುಖ್ಯ ಶಿಕ್ಷಕಿ ವಿರುದ್ಧ ವಿದ್ಯಾರ್ಥಿಗಳಿಂದ ಮನೆಯ ಶೌಚಾಲಯ ಸ್ವಚ್ಛತೆ ಮಾಡಿಸಿದ ಆರೋಪ: ಪ್ರಕರಣ ದಾಖಲು - Zohara Zubeen

ಶಾಲೆಯ ಮಕ್ಕಳಿಂದ‌ ಮುಖ್ಯ ಶಿಕ್ಷಕಿಯೊಬ್ಬರು ಶಾಲೆಯಲ್ಲಿ ಹಾಗೂ ತಮ್ಮ‌ ಮನೆಯ ಶೌಚಾಲಯ ಸ್ವಚ್ಛತೆ ಮಾಡಿಸಿರುವ ಆರೋಪ ಕಲಬುರಗಿಯಲ್ಲಿ ಕೇಳಿಬಂದಿದೆ.

home-toilet-cleaning-by-students-allegation-against-a-kalaburagi-teacher
ವಿದ್ಯಾರ್ಥಿಗಳಿಂದ ಮನೆಯ ಶೌಚಾಲಯ ಸ್ವಚ್ಛತೆ ಮಾಡಿಸಿದ ಮುಖ್ಯ ಶಿಕ್ಷಕಿ: ಪ್ರಕರಣ ದಾಖಲು
author img

By ETV Bharat Karnataka Team

Published : Jan 16, 2024, 8:07 PM IST

Updated : Jan 16, 2024, 8:36 PM IST

ಮುಖ್ಯ ಶಿಕ್ಷಕಿ ಜೋಹರಾ ಜುಬೀನ್ ಪ್ರತಿಕ್ರಿಯೆ

ಕಲಬುರಗಿ: ಮುಖ್ಯ ಶಿಕ್ಷಕಿಯೊಬ್ಬರು ಶಾಲೆಯ ಮಕ್ಕಳಿಂದ‌ ಶಾಲೆಯ ಹಾಗೂ ತಮ್ಮ‌ ಮನೆಯ ಶೌಚಾಲಯ ಸ್ವಚ್ಛತೆ ಮಾಡಿಸಿರುವ ಆರೋಪ ಕಲಬುರಗಿಯಲ್ಲಿ ಕೇಳಿಬಂದಿದೆ. ಕಲಬುರಗಿ ನಗರದ ಮಾಲಗತ್ತಿ ಗ್ರಾಮದ ರಸ್ತೆಯಲ್ಲಿರೋ ಮೌಲಾನಾ ಆಜಾದ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಘಟನೆ ನಡೆದಿದೆ.

ಕಳೆದೊಂದು ವರ್ಷದಿಂದ ವಿದ್ಯಾರ್ಥಿಗಳನ್ನ ಮನೆಗೆಲಸಕ್ಕೆ ಕರೆದುಕೊಂಡು ಹೋಗಲಾಗುತ್ತಿದೆ. ಕೆಲ ವಿದ್ಯಾರ್ಥಿಗಳಿಂದ ಶಾಲೆಯಲ್ಲಿ ಶೌಚಾಲಯ ಸ್ವಚ್ಛಪಡಿಸಿ, ಕೆಲ ವಿದ್ಯಾರ್ಥಿಗಳನ್ನ ಮನೆಗೆ ಕರೆದುಕೊಂಡು ಹೋಗಿ ಶೌಚಾಲಯ ಸ್ವಚ್ಛ ಮಾಡಿಸುತ್ತಿದ್ದರು. ಒಂದು ವೇಳೆ ವಿದ್ಯಾರ್ಥಿಗಳು ಕೆಲಸಕ್ಕೆ ನಿರಾಕರಿಸಿದರೆ ಮುಖ್ಯೋಪಾಧ್ಯಾಯರಾದ ಜೋಹರಾ ಜುಬೀನ್ ಅವರು ಬಯ್ಯುವುದು, ಹೊಡೆಯುವುದು ಮಾಡುತ್ತಿದ್ದರು ಎಂದು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಆರೋಪಿಸಿದ್ದಾರೆ.

ಕಳೆದ ಶನಿವಾರ ವಿದ್ಯಾರ್ಥಿಯೊಬ್ಬನನ್ನು ಶಾಲೆ ಬಿಟ್ಟ ನಂತರ ಬಲವಂತದಿಂದ ಮನೆಗೆ ಕರೆದುಕೊಂಡು ಹೋಗಿದ್ದಾರೆ. ವಿದ್ಯಾರ್ಥಿಯಿಂದ ತಮ್ಮ ಮನೆಯ ಗಾರ್ಡನ್ ಸ್ವಚ್ಛಗೊಳಿಸುವ ಕೆಲಸ ಮಾಡಿಸಿಕೊಂಡಿದ್ದಾರೆ. ಕೆಲಸ ಮಾಡದಿದ್ದರೆ ಬಟ್ಟೆ ಬಿಚ್ಚಿ ಹೊಡೆಯುವುದಾಗಿ ಮುಖ್ಯ ಶಿಕ್ಷಕಿ ಬೆದರಿಕೆ ಹಾಕಿರುವುದಾಗಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ತಮ್ಮ ಮಗನಿಂದ ಮನೆ ಕೆಲಸ ಮಾಡಿಸಿಕೊಂಡಿರುವುದನ್ನು ಪ್ರಶ್ನಿಸಿದ ಪೋಷಕರ ಮೇಲೆ ಮುಖ್ಯ ಶಿಕ್ಷಕಿಯ ಪತಿ ಹಲ್ಲೆಗೆ ಯತ್ನ ನಡೆಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಮುಖ್ಯ ಶಿಕ್ಷಕಿ ವಿರುದ್ಧ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಶೌಚಾಲಯಗಳ ಸ್ವಚ್ಛತೆ, ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಮಾರ್ಗಸೂಚಿ: ಇತ್ತೀಚಿಗೆ, ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತೆಯನ್ನು ನಿರ್ವಹಿಸಲು ವಿದ್ಯಾರ್ಥಿಗಳನ್ನು ಬಳಸದಿರುವ ಕುರಿತು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಮಾರ್ಗಸೂಚಿ ಹೊರಡಿಸಿದ್ದರು.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಇತ್ತೀಚಿಗೆ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಶೌಚಾಲಯಗಳನ್ನು ವಿದ್ಯಾರ್ಥಿಗಳಿಂದ ಸ್ವಚ್ಛತೆ ಮಾಡಿಸುತ್ತಿರುವ ಕುರಿತು ಸರ್ಕಾರ ಎಚ್ಚೆತ್ತುಕೊಂಡಿದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳಲ್ಲಿ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಮಾತ್ರ ತೊಡಗಿಸಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಂತಹ ಕಾರ್ಯಗಳಿಂದ ದೂರ ಇರಿಸುವುದು ಅಧಿಕಾರಿಗಳ, ಮುಖ್ಯ ಶಿಕ್ಷಕರ ಹಾಗೂ ಶಿಕ್ಷಕರ, ಸಿಬ್ಬಂದಿಯ ಕರ್ತವ್ಯವಾಗಿರುತ್ತದೆ. ಆದರೆ ಅವರು ಈ ಹೊಣೆಗಾರಿಕೆಯನ್ನು ಮರೆತು ವಿದ್ಯಾರ್ಥಿಗಳನ್ನು ಸ್ವಚ್ಛತೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಆಕ್ಷೇಪಣೀಯ ಮತ್ತು ಖಂಡನೀಯ. ಇಂತಹ ಘಟನೆಗಳನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಶೌಚಾಲಯಗಳ ಸ್ವಚ್ಛತೆಯನ್ನು ನಿರ್ವಹಿಸುವ ಕುರಿತು ಕೆಲ ಅಂಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸರ್ಕಾರ ಸೂಚಿಸಿತ್ತು.

ಇದನ್ನೂ ಓದಿ: ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ ಪ್ರಕರಣ ಬೆನ್ನಲ್ಲೇ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

Last Updated : Jan 16, 2024, 8:36 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.