ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ತೋಟಗಾರಿಕೆ ಹಿಂದುಳಿದಿದ್ದು, ಅವುಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಡಿಸೆಂಬರ್ 7ರಂದು ಜಿಲ್ಲೆಯಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ತೋಟಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ದಿಡ್ಡಿಮನಿ ಹೇಳಿದರು.
ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರೈತರಲ್ಲಿ ತೋಟಗಾರಿಕೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ. ಇದರಿಂದಾಗಿ ತೋಟಗಾರಿಕಾ ಬೆಳೆಗಳ ಬೆಳವಣಿಗೆಯಲ್ಲಿ ಸಕಾರಾತ್ಮಕ ಫಲಿತಾಂಶ ಸಿಗಲಿದ್ದು, ರೈತರಿಗೂ ಅನುಕೂಲವಾಗಲಿದೆ ಎಂದರು.
ಈ ವೇಳೆ ವಿಶ್ರಾಂತ ಕುಲಪತಿ ಪ್ರೊ.ಎಸ್.ಎ.ಪಾಟೀಲ ಭಾಗಿಯಾಗಿದ್ದರು.