ETV Bharat / state

ನಮ್ಮ ಸರ್ಕಾರದ ಈ ಅವಧಿ‌ಯಲ್ಲೇ 10 ಲಕ್ಷ ಮನೆ ನಿರ್ಮಾಣದ ಗುರಿ: ಸಚಿವ ವಿ. ಸೋಮಣ್ಣ - houses to trans genders

ಕೇಂದ್ರ ಸರ್ಕಾರ 18 ಲಕ್ಷ ಮನೆಗಳನ್ನು ರಾಜ್ಯಕ್ಕೆ ನೀಡಿದೆ. ಪ್ರಸ್ತುತ ರಾಜ್ಯ ಸರ್ಕಾರದ ಅವಧಿ ಮುಗಿಯೋದರೊಳಗೆ 8 ರಿಂದ 10 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ಸಚಿವ ಸೋಮಣ್ಣ ಹೇಳಿದರು.

minister v somanna
ಸಚಿವ ವಿ. ಸೋಮಣ್ಣ
author img

By

Published : Jun 18, 2022, 8:07 PM IST

ಕಲಬುರಗಿ: ಕೇಂದ್ರ ಸರ್ಕಾರ 18 ಲಕ್ಷ ಮನೆಗಳನ್ನು ರಾಜ್ಯಕ್ಕೆ ನೀಡಿದೆ. ಪ್ರಸ್ತುತ ರಾಜ್ಯ ಸರ್ಕಾರದ ಅವಧಿ ಮುಗಿಯೋದರೊಳಗೆ 8 ರಿಂದ 10 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದರು.

ಸಚಿವ ವಿ. ಸೋಮಣ್ಣ

ನಗರದಲ್ಲಿಂದು ಮಾತನಾಡಿದ ಅವರು, ಕೇಂದ್ರ ಸರ್ಕಾರ ಹತ್ತಾರು ಯೋಜನೆಗಳನ್ನು ರಾಜ್ಯಕ್ಕೆ ನೀಡಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿನ ಗೊಂದಲ ನಿವಾರಣೆ ಮಾಡಲಾಗಿದೆ. ಅಲ್ಲದೇ ಕರ್ನಾಟದಕ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಮಂಗಳಮುಖಿಯರಿಗೆ ಮನೆಗಳನ್ನು ನಿರ್ಮಿಸಿಕೊಡಲಾಗ್ತಿದೆ. ಬೆಂಗಳೂರಿನ ಕೆಂಗೇರಿ ಬಳಿ ಈಗಾಗಲೇ ಮನೆಗಳನ್ನು ನಿರ್ಮಿಸಲಾಗ್ತಿದೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ಪೈಲಟ್ ಯೋಜನೆ ಜಾರಿಗೆ ತರಲಾಗ್ತಿದೆ. ಗ್ರಾಮೀಣ ಭಾಗದಲ್ಲಿ ವಸತಿ ವ್ಯವಸ್ಥೆ ಬಗ್ಗೆ ಸರ್ವೇ ಮಾಡಲಾಗ್ತಿದೆ. ಜೂ. 30ರೊಳಗೆ ಸರ್ವೇ ಮುಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬಿಬಿಎಂಪಿ ಚುನಾವಣೆ ವಿಚಾರ: ಬೆಂಗಳೂರಿನ ಜನಸಂಖ್ಯೆ ಒಂದೂವರೆ ಕೋಟಿಗೂ ಮೀರಿದೆ. ಚುನಾವಣೆ ನಡೆಸಲು ಸಿಎಂ ಬೊಮ್ಮಾಯಿ‌ ಉತ್ಸುಕರಾಗಿದ್ದಾರೆ. ಕೋರ್ಟ್ ನಿಯಮಾವಳಿಗಳ ಪ್ರಕಾರ ಬಿಬಿಎಂಪಿ ಚುನಾವಣೆ ನಡೆಸಲಾಗುತ್ತದೆ ಎಂದರು.

ಇದನ್ನೂ ಓದಿ: ಕಾಂಗ್ರೆಸ್ ದುರ್ಬಲವಾಗ್ತಿದೆ, ಕಾರ್ಯಕರ್ತರಲ್ಲಿ ಬೇಜವಾಬ್ದಾರಿತನ ಬಂದಿದೆ : ಕಾಗೋಡು ತಿಮ್ಮಪ್ಪ

ಅಗ್ನಿಪಥ್ ವಿಚಾರ: ಅಗ್ನಿಪಥ್ ಹಿಂದೆ ಯಾರಿದ್ದಾರೆಂದು ನನಗೆ ಗೊತ್ತಿಲ್ಲ. ಅಗ್ನಿಪಥ್​ ಬಗ್ಗೆ ಭಾರಿ ಚರ್ಚೆ ಆಗ್ತಿದೆ. ಜನ ಸಾಮಾನ್ಯರಿಗೆ ಬೇಡವಾದ ಯೋಜನೆಯನ್ನು ಸರ್ಕಾರ ಜಾರಿ ಮಾಡೋದಿಲ್ಲ. ಎರಡ್ಮೂರು ದಿನಗಳಲ್ಲಿ ಇದರ ಬಗ್ಗೆ ಕೇಂದ್ರ ನಿರ್ಧಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.