ETV Bharat / state

ಕಲ್ಯಾಣ ಕರ್ನಾಟಕದಲ್ಲಿ ಅಮೃತ ಮಹೋತ್ಸವ ಸಂಭ್ರಮ.. ವಿಮೋಚನಾ ದಿನಾಚರಣೆಯಲ್ಲಿ ಸಿಎಂ ಭಾಗಿ

ನಿಜಾಮನ ಆಳ್ವಕೆಯಿಂದ ಹೈದರಾಬಾದ್ ಕರ್ನಾಟಕಕ್ಕೆ ವಿಮೋಚನೆ ದೊರೆತು ಸೆ.17ಕ್ಕೆ 75 ವರ್ಷ ತುಂಬಲಿದೆ.

Etv Bharat
Etv Bharat
author img

By ETV Bharat Karnataka Team

Published : Sep 16, 2023, 9:22 PM IST

Updated : Sep 16, 2023, 11:08 PM IST

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗ ಸ್ವಾತಂತ್ರ್ಯ ಸಂಭ್ರಮದಲ್ಲಿದೆ‌. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ 13 ತಿಂಗಳ ಬಳಿಕ ಕಲ್ಯಾಣ ಕರ್ನಾಟಕ ಭಾಗಕ್ಕೆ ಸ್ವಾತಂತ್ರ್ಯ ಲಭಿಸಿದ್ದು, ಕಲ್ಯಾಣ ನಾಡು ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಕಲಬುರಗಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೇರವೇರಿಸಲಿದ್ದು, ಇದಕ್ಕಾಗಿ ಭರದ ಸಿದ್ಧತೆ ನಡೆಯುತ್ತಿದೆ.

ಕಲ್ಯಾಣ ಕರ್ನಾಟಕದ ಎಳು ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ದಿನದ ಸಂಭ್ರಮ ಮನೆ ಮಾಡಿದೆ. ದೇಶಕ್ಕೆ ಆಗಸ್ಟ್‌ 1947 ರಲ್ಲಿ ಸ್ವಾತಂತ್ರ್ಯ ಸಿಕ್ಕಿದೆ. ಆದರೆ ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಿಗೆ ಹೈದರಾಬಾದ್ ನಿಜಾಮನ ಆಳ್ವಕೆಯಲ್ಲಿತ್ತು. ಭಾರತ ಸ್ವಾತಂತ್ರ್ಯಗೊಂಡು ಒಂದು ವರ್ಷ ಆದ ನಂತರ ನಿಜಾಮನಿಂದ ಈ ಪ್ರದೇಶ ದೇಶದ ಭಾಗವಾಗಿ ಸೇರ್ಪಡೆ ಆಗಿತ್ತು. ಅಂದರೆ 1948 ಸೆಪ್ಟೆಂಬರ್ 17 ರಂದು ಇದು ಭಾರತದ ಭಾಗವಾಗಿ ಸ್ವಾತಂತ್ರ್ಯ ಲಭಿಸಿತ್ತು.

ಸ್ವಾತಂತ್ರ್ಯ ಲಭಿಸಿ 75 ಪೂರ್ಣಗೊಂಡಿರೋ ಹಿನ್ನೆಲೆ ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಣೆ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಬೆಳಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ನೇರವೇರಿಸಲಿದ್ದಾರೆ. ಇದಕ್ಕೂ ಮುನ್ನ ಕಲ್ಯಾಣ ನಾಡಿನ ಸ್ವಾತಂತ್ರ್ಯಕ್ಕಾಗಿ ದಿಟ್ಟ ಕ್ರಮಕೈಗೊಂಡು ಮಿಲಿಟರಿ ಆಪರೇಷನ್ ನಡೆಸಿ ಹೈದರಾಬಾದ್ ನಿಜಾಮನ ಕಪಿಮುಷ್ಠಿಯಿಂದ ಮುಕ್ತಿಗೊಳಿಸಿ ಸ್ವಾತಂತ್ರ್ಯ ಕೊಡಿಸಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುತ್ಥಳಿಗೆ ಸಿಎಂ ಬೆಳಗ್ಗೆ 8:30 ಕ್ಕೆ ಮಾಲಾರ್ಪಣೆ ಮಾಡಲಿದ್ದಾರೆ‌.

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಿನ್ನೆಲೆ ಕಲಬುರಗಿ ಜಿಲ್ಲಾಡಳಿತ ಭರದ ಸಿದ್ಧತೆ ನಡೆಸಿದೆ. ಪೊಲೀಸ್ ಪರೇಡ್ ಮೈದಾನ ಮತ್ತು ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಸಕಲ ರೀತಿಯ ಸಿದ್ಧತೆ ನಡೆಸಿದೆ. ಸಿಎಂ ಆಗಮನ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ನೂರಾರು ಪೊಲೀಸರನ್ನು ಬಂದೋಬಸ್ತ್ ಗೆ ನಿಯೋಜನೆ ಮಾಡಿಕೊಳ್ಳುತ್ತಿದ್ದು, ಹದ್ದಿನ ಕಣ್ಣಿಟ್ಟಿದೆ. ಇನ್ನು ಕಲ್ಯಾಣ ನಾಡಿಗೆ ಕಲಂ 371 (ಜೆ) ವಿಶೇಷ ಸ್ಥಾನಮಾನ ಲಭಿಸಿ ಹತ್ತು ವರ್ಷಗಳಾಗಿದ್ದು, ದಶಮಾನೋತ್ಸವವನ್ನು ಕೂಡ ಇದೇ ಸಮಯದಲ್ಲಿ ಆಚರಣೆ ಮಾಡಲಾಗುತ್ತಿದೆ.

ಇನ್ನು, ನಾಳೆ ಪೊಲೀಸ್ ಪರೇಡ್ ಮೈದಾನದಲ್ಲಿ ಸಿಎಂ ಧ್ವಜಾರೋಹಣ ಬಳಿಕ ಆಕರ್ಷಕ ಪಥಸಂಚಲ ಜರುಗಲಿದೆ. ಅಲ್ಲದೆ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಕಲಾವಿದರಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್​ ಖರ್ಗೆ ಮತ್ತು ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಲ್ಯಾಣ ನಾಡಿನ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಿಗೆ ಸಿಎಂ ಭಾನುವಾರ ಸನ್ಮಾನ ಮಾಡಲಿದ್ದಾರೆ. ಒಟ್ಟಿನಲ್ಲಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ದಿನದ ಸಡಗರ, ಸಂಭ್ರಮ ಮನೆ ಮಾಡಿದೆ. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಗೆ ಕ್ಷಣಗಣನೆ ಆರಂಭವಾಗಿದೆ.

ಇದನ್ನೂ ಓದಿ: ಕೇಂದ್ರ ಸರ್ಕಾರದ ಬರ ನಿರ್ವಹಣೆ ಮಾನದಂಡದಿಂದ ಬರಗಾಲ ಘೋಷಣೆ ವಿಳಂಬವಾಗಿದೆ: ಸಿಎಂ ಸಿದ್ದರಾಮಯ್ಯ

Last Updated : Sep 16, 2023, 11:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.