ಕಲಬುರಗಿ: ಕಳೆದ ಅವಧಿಗೆ ಶಿಕ್ಷಕರ ಕ್ಷೇತ್ರದ ಕೆಲಸ ಮಾಡಲು ಅವಕಾಶ ಸಿಕ್ಕಿತ್ತು. ಶಿಕ್ಷಕರ ಸಮಸ್ಯೆಗಳ ಬಗ್ಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. ಈ ಬಾರಿಯೂ ಮತದಾರರು ಕೈ ಹಿಡಿಯಲಿದ್ದಾರೆ ಎನ್ನುವ ನಂಬಿಕೆ ನನಗಿದೆ. ಮತ್ತೆ ಗೆದ್ದು ಬರಲಿದ್ದೇನೆ ಎಂದು ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ವಿಶ್ವಾಸ ವ್ಯಕ್ತಪಡಿಸಿದರು.
ಉಮೇದುವಾರಿಕೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಗೆ ನನಗೆ ಶಿಕ್ಷಕರ ಪರವಾಗಿ ಕೆಲಸ ಮಾಡುವ ಅವಕಾಶ ದೊರೆತಿತ್ತು. ನಮ್ಮ ಸಾಮರ್ಥ್ಯಕ್ಕೂ ಮೀರಿ ಶಿಕ್ಷಕರ ಶ್ರೇಯೋಭಿವೃದ್ದಿಗೆ ಶ್ರಮಿಸಿರುವೆ. ಶಿಕ್ಷಕರಿಗೆ ದಕ್ಕಬೇಕಾದ ಬಹುತೇಕ ಸೌಲಭ್ಯಗಳನ್ನು ಒದಗಿಸುವಲ್ಲಿ ಯಶಸ್ವಿಯಾಗಿರುವ ಸಂತೋಷ ನನಗಿದೆ.
ಮತ್ತೆ ಎರಡನೇ ಅವಧಿಗೆ ಚುನಾವಣೆಗೆ ಸ್ಪರ್ಧಿಸುತ್ತಿರುವೆ ಶಿಕ್ಷಕರ ಒಲವು ಕಾಂಗ್ರೆಸ್ ಮೇಲೆ ಹೆಚ್ಚಿದೆ, ನನ್ನ ಕೆಲಸ ನೋಡಿ ಮತದಾರರು ಮತ್ತೆ ನನ್ನ ಕೈ ಹಿಡಿಯುತ್ತಾರೆ ಎಂಬ ವಿಶ್ವಾಸವಿದೆ ಎಂದರು.