ಕಲಬುರಗಿ: ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರನ್ನು ಮತ್ತೆ ಕಲಬುರಗಿಯ ಪೊಲೀಸ್ ತರಬೇತಿ ಕೇಂದ್ರದ ಪ್ರಿನ್ಸಿಪಾಲ್ ಎಸ್ಪಿ ಆಗಿ ಸರ್ಕಾರ ನಿಯೋಜಿಸಿದೆ.
ಈ ಹಿಂದೆ ಕಲಬುರಗಿ ಎಸ್ಪಿ ಆಗಿ ಸೇವೆ ಸಲ್ಲಿಸಿದ್ದ ಐಪಿಎಸ್ ಅಧಿಕಾರಿ ಮಾರ್ಬನ್ಯಾಂಗ್ ಅವರನ್ನು ಕಳೆದ 20 ದಿನಗಳ ಹಿಂದೆ ಉಡುಪಿಯ ನಕ್ಸಲ್ ನಿಗ್ರಹ ದಳಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಮತ್ತೆ ಕಲಬುರಗಿ ಪೊಲೀಸ್ ತರಬೇತಿ ಕೇಂದ್ರದ ಪ್ರಿನ್ಸಿಪಾಲ್ ಎಸ್ಪಿ ಆಗಿ ನೇಮಕ ಮಾಡಿ ಸರ್ಕಾರ ಆದೇಶ ನೀಡಿದೆ.