ETV Bharat / state

ಉತ್ತಮ ಅಭ್ಯರ್ಥಿ ಕಾಣದಿದ್ದರೆ NOTA ಬಟನ್‌ ಒತ್ತಿ: ವಿಶ್ವೇಶ್ವರ ಹೆಗಡೆ ಕಾಗೇರಿ - ETv Bharat kannada news

ಸಂವಿಧಾನಬದ್ಧವಾಗಿ ಸಿಕ್ಕಿರುವ ಮತ ಹಕ್ಕನ್ನು ಕಳೆದುಕೊಳ್ಳಬೇಡಿ. ಅಭ್ಯರ್ಥಿಗಳಲ್ಲಿ ಉತ್ತಮರು ಕಾಣದಿದ್ದರೆ ನೋಟಾ(NOTA) ಬಟನ್ ಒತ್ತಿ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

Vishweshwar Hegade Kageri is the Speaker of the Karnataka Legislative Assembly
ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ
author img

By

Published : Dec 1, 2022, 6:57 AM IST

ಕಲಬುರಗಿ: ಸಂವಿಧಾನಬದ್ಧವಾಗಿ ಸಿಕ್ಕಿರುವ ಮತದ ಹಕ್ಕನ್ನು ಕಳೆದುಕೊಳ್ಳಬೇಡಿ. ಅಭ್ಯರ್ಥಿಗಳಲ್ಲಿ ಉತ್ತಮರು ಕಾಣದಿದ್ದರೆ ಈ ಮೇಲಿನ ಯಾರೂ ಅಲ್ಲ (ನೋಟಾ) ಬಟನ್ ಒತ್ತಿ ಎಂದು ಕರ್ನಾಟಕ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಲಹೆ ನೀಡಿದರು. ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನನ್ನ ಮತ ಯಾವುದೇ ಕಾರಣಕ್ಕೂ ಮಾರಾಟಕ್ಕಿಲ್ಲ ಎಂಬ ಆತ್ಮಸಾಕ್ಷಿಯ ಅಭಿಯಾನ ಕೈಗೊಳ್ಳಿ ಎಂದು ಕರೆ ಕೊಟ್ಟರು.

'ಎಲ್ಲ ಕ್ಷೇತ್ರಗಳಲ್ಲೂ ಮೌಲ್ಯಗಳ ಕುಸಿತ': ಬುಧವಾರ ನಗರದ ಡಾ.ಎಸ್.ಎಂ ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ “ಚುನಾವಣೆ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ” ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಕಾಗೇರಿ ಮಾತನಾಡಿದರು. ಚುನಾವಣೆಯಲ್ಲಿಂದು ಹಣ, ತೋಳ್ಬಲ ಹಾಗೂ ಜಾತಿ ಬಲ ಪ್ರಮುಖ ಪಾತ್ರ ವಹಿಸುತ್ತಿವೆ. ಸಂವಿಧಾನಬದ್ಧವಾಗಿ ಸಿಕ್ಕಿರುವ ಮತದ ಹಕ್ಕನ್ನು ಮತದಾರರು ಅರಿಯಬೇಕು. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾರಂಗ ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಮೌಲ್ಯಗಳು ಕುಸಿತವಾಗುತ್ತಿದ್ದು ಭ್ರಷ್ಟಾಚಾರ ವ್ಯಾಪಿಸಿದೆ ಎಂದು ಕಳವಳ ವ್ಯಕ್ತಪಡಿಸಿದರು.

'ಮತ ಮಾರಿಕೊಳ್ಳದೆ ಉತ್ತಮರ ಆಯ್ಕೆ ಮಾಡಿ': ಜನಪ್ರತಿನಿಧಿಗಳು ಜನರಿಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸುವಲ್ಲಿ ವಿಫಲರಾಗಿ ಕಾರ್ಯಾಂಗದಲ್ಲಿ ಮಾನವೀಯತೆ ಮರೆತಿದ್ದು ಜನರು ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯಲು ಕಚೇರಿಯಿಂದ ಕಚೇರಿಗೆ ಅಲೆದಾಡಿ ರೋಸಿ ಹೋಗಿದ್ದಾರೆ. ನ್ಯಾಯಾಲಯಗಳು ನ್ಯಾಯ ನೀಡುವ ಬದಲಾಗಿ ನಿರ್ಣಯ ನೀಡುತ್ತಿವೆ. ಇನ್ನು ಮಾಧ್ಯಮ ಕ್ಷೇತ್ರವೂ ಸಾಮಾಜಿಕ ಹೊಣೆಗಾರಿಕೆ ಮರೆತಿದ್ದು, ಇಲ್ಲಿಯೂ ಭ್ರಷ್ಟಾಚಾರ ಕಾಲಿಟ್ಟಿದೆ. ಶಿಕ್ಷಣ ಸಂಸ್ಥೆಗಳು ರಾಷ್ಟ್ರೀಯತೆಯನ್ನು ಮರೆತಂತಿವೆ. ಜ್ವರ, ನೆಗಡಿ ಬಂದು ಆಸ್ಪತ್ರೆಗೆ ಹೋದರೆ ಹತ್ತಾರು ತಪಾಸಣೆ ಮಾಡುತ್ತಾರೆ. ಇದರಿಂದ ಆದರ್ಶ ಮೌಲ್ಯಗಳು, ನೈತಿಕತೆಯು ಅಧ:ಪತನಕ್ಕೆ ಇಳಿದಿದ್ದು, ವಿಷವರ್ತುಲದಲ್ಲಿ ನಾವು ಸಾಗುತ್ತಿದ್ದೇವೆ. ಇದಕ್ಕೆಲ್ಲ ಮತ ಮಾರಿಕೊಳ್ಳದೆ ಉತ್ತಮರನ್ನು ಆಯ್ಕೆ ಮಾಡುವುದೇ ಪರಿಹಾರ ಎಂದರು.

ಚುನಾವಣೆ ವ್ಯವಸ್ಥೆಯಲ್ಲಿ ಸುಧಾರಣೆ ನಿಟ್ಟಿನಲ್ಲಿ ಈಗಾಗಲೇ ವಿಧಾನಸಭೆಯಲ್ಲಿ ಚರ್ಚಿಸಲಾಗಿದ್ದು, ಪಕ್ಷಾಂತರ ಕಾಯ್ದೆಗೆ ಮತ್ತಷ್ಟು ಬಲ ನೀಡಲು ಚಿಂತನೆ ನಡೆದಿದೆ. ಪ್ರಾಣಾಳಿಕೆ ಈಡೇರಿಸುವತ್ತ ಆಡಳಿತ ಪಕ್ಷ ಗಮನಹರಿಸಬೇಕು. ಇವೆಲ್ಲದರ ಬಗ್ಗೆ ಜನಾಭಿಪ್ರಾಯ ಮೂಡಿಸಲು ಜನರೊಂದಿಗೆ ಸಂವಾದ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ನ್ಯಾಯಾಲಯದಲ್ಲಿ ನಿರ್ಣಯ ಸಿಗುತ್ತೆ, ನ್ಯಾಯ ಸಿಗಲ್ಲ : ವಿಶ್ವೇಶ್ವರ ಹೆಗಡೆ ಕಾಗೇರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.