ಕಲಬುರಗಿ: ಬಕ್ರೀದ್ ಹಬ್ಬದ ಅಂಗವಾಗಿ ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಿಸುವಲ್ಲಿ ಫರತಾಬಾದ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಟಂಟಂ ವಾಹನದಲ್ಲಿ ಪ್ರಾಣಿಗಳನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಿಎಸ್‌ಐ ಯಶೋಧಾ ಕಟಕೆ ಹಾಗೂ ಸಿಬ್ಬಂದಿ ಹತ್ತು ಗೋವುಗಳನ್ನು ರಕ್ಷಿಸಿದ್ದಾರೆ.
ಸದ್ಯ ಗೋವುಗಳನ್ನು ಗೋ ಶಾಲೆಗೆ ಕಳುಹಿಸಿದ್ದಾರೆ. ವಾಹನ ಮತ್ತು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.