ಕಲಬುರಗಿ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದಿರುವ ಸಬ್ಅರ್ಬನ್ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಅಕ್ರಮ ಸಾಗಣೆಯ ಬಗ್ಗೆ ಮಾಹಿತಿ ಪಡೆದಿದ್ದ ಪೊಲೀಸರು, ಕಲಬುರಗಿ ನಗರದ ರಫಿಕ್ ಚೌಕ್‌ನಲ್ಲಿ ದಾಳಿ ನಡೆಸಿದ್ದಾರೆ. ವಾಹನವನ್ನು ತಡೆದು ತಪಾಸಣೆ ಮಾಡಿದಾಗ 7 ಟನ್‌ಗೂ ಅಧಿಕ ಪಡಿತರ ಅಕ್ಕಿ ಪತ್ತೆಯಾಗಿದೆ.
ಇದನ್ನೂ ಓದಿ: ಶಿವಮೊಗ್ಗ: ಸಾಮಿಲ್ಗೆ ಬೆಂಕಿ, ಕೋಟ್ಯಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ
ಅಕ್ಕಿ ಹಾಗೂ ವಾಹನ ವಶಕ್ಕೆ ಪಡೆದ ಪೊಲೀಸರು, ಮಹಾರಾಷ್ಟ್ರ ಮೂಲದ ಅನಿಲ್ ರಾಠೋಡ್ ಎಂಬಾತನನ್ನು ಬಂಧಿಸಿದ್ದಾರೆ. ಕಲಬುರಗಿಯಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಎಂಬ ಅಂಶ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ಹೆಚ್ಚಿನ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಈ ಕುರಿತು ಸಬ್ ಅರ್ಬನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.