ETV Bharat / state

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ: ಕಲಬುರಗಿಯಲ್ಲಿ ತುರ್ತು ಸಭೆ - Increasing Corona Cases Kalabari

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪಿಲ್ ಮೋಹನ್ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.

Emergency Meeting
ತುರ್ತು ಸಭೆ
author img

By

Published : Apr 14, 2020, 9:24 AM IST

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ನಗರಕ್ಕೆ ಭೇಟಿ ನೀಡಿದ ಮೂಲಸೌಕರ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪಿಲ್ ಮೋಹನ್ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತುರ್ತು ಸಭೆ ಕರೆದ ಉಸ್ತುವಾರಿ ಕಾರ್ಯದರ್ಶಿ, ಕೊರೊನಾ ಪ್ರಕರಣಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಇನ್ನು ಜಿಲ್ಲೆಯಲ್ಲಿ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಕಪಿಲ್ ಮೋಹನ್ ಸೂಚಿಸಿದ್ದಾರೆ.

ಈಶಾನ್ಯ ವಲಯ ಐಜಿಪಿ ಮನೀಷ್ ಖರ್ಬೀಕರ್, ನಗರ ಪೊಲೀಸ್ ಆಯುಕ್ತ ಎನ್.ಸತೀಶ್ ಕುಮಾರ್, ಜಿಲ್ಲಾಧಿಕಾರಿ ಶರತ್.ಬಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪಿ. ರಾಜಾ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ರಾಹುಲ‌್ ಪಾಂಡ್ವೆ ಸೇರಿದಂತೆ ವಿವಿಧ‌ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.