ಕಲಬುರಗಿ: ಚಿಂಚೋಳಿ ಉಪ ಚುನಾವಣೆ ಹಿನ್ನೆಲೆ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದರೆ, ಮತ್ತೊಂದೆಡೆ ಪಕ್ಷೇತರ ಅಭ್ಯರ್ಥಿ ಎರಡೂ ಪಕ್ಷಕ್ಕೆ ಟಫ್ಫೈಟ್ ಕೊಡುವ ನಿಟ್ಟಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು.
ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಗಾಜರೆ ಅವರು ಕಾಳಗಿ, ಕೊಡ್ಲಿ, ಸೇರಿತಾಂಡಾ, ಮೊಘಾ, ಚಂದನಕೇರಾ ಸೇರಿದಂತೆ ವಿವಿಧ ಕಡೆ ಕಾರ್ಯಕರ್ತರೊಂದಿಗೆ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಿದರು. ಪ್ರಚಾರಕ್ಕೂ ಮುನ್ನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಗಾಜರೆ ಅಪಾರ ಬೆಂಬಲಿಗರೊಂದಿಗೆ ರೋಡ್ ಶೋನಲ್ಲಿ ಭಾಗಿಯಾಗಿದ್ದರು.