ಕಲಬುರಗಿ: ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಅವರು ಜಿಲ್ಲಾ ಪ್ರವಾಸ ಕೈಗೊಂಡು ಬರ ಪರಿಹಾರ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಅಫ್ಜಲ್ಪುರ ತಾಲೂಕಿನ ಗೊಬ್ಬೂರು ಗ್ರಾಮಕ್ಕೆ ಭೇಟಿ ನೀಡಿದ್ದ ಸಚಿವ ದೇಶಪಾಂಡೆ, ಟ್ಯಾಂಕರ್ ಮೂಲಕ ನೀರು ಪೂರೈಕೆ ಕುರಿತು ಮಾಹಿತಿ ಪಡೆದುಕೊಂಡರು. ನಂತರ ಗೊಬ್ಬೂರು ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿನ ಸಿತ್ಥಿಗತಿಯನ್ನು ವಿಚಾರಿಸಿದರು. ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಮತ್ತಿತರರು ಸಚಿವರಿಗೆ ಸಾಥ್ ನೀಡಿದ್ರು.