ಕಲಬುರಗಿ: ಸೆಪ್ಟೆಂಬರ್ 15ರ ಒಳಗಾಗಿ ದೀಕ್ಷ, ಪಂಚಮಸಾಲಿ ಹಾಗೂ ಲಿಂಗಾಯತ ಒಳಪಂಗಡಗಳಿಗೆ 2ಎ ಮೀಸಲಾತಿ ನೀಡದಿದ್ದರೆ ಅಕ್ಟೋಬರ್ ಒಂದರಿಂದ ಫ್ರೀಡಂ ಪಾರ್ಕ್ನಲ್ಲಿ ಮತ್ತೆ ಧರಣಿ ನಡೆಸುವುದಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಜನವರಿ 14, 2021ರಂದು 2ಎ ಮೀಸಲಾತಿಗಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಕೂಡಲಸಂಗಮದಿಂದ ಬೆಂಗಳೂರಿನವರೆಗೆ 712 ಕಿಲೋ ಮೀಟರ್ ಪಾದಯಾತ್ರೆ, ಹೋರಾಟ ಮತ್ತು 21 ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹೋರಾಟ ನಡೆಸಿದ್ರು. ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರು ತಿಂಗಳ ಕಾಲಾವಕಾಶ ಕೇಳಿ 2ಎ ಮೀಸಲಾತಿ ನೀಡುವ ಭರವಸೆ ನೀಡಿದ್ರು. ಆದರೀಗ ಕೊಟ್ಟ ಆರು ತಿಂಗಳ ಅವಧಿ ಸೆಪ್ಟೆಂಬರ್ 15ರಂದು ಮುಕ್ತಾಯವಾಗಲಿದೆ. ಹೀಗಾಗಿ ಕೊಟ್ಟ ಮಾತಿನಂತೆ ಸರ್ಕಾರ ಸೆ.15ರ ಒಳಗಾಗಿ 2ಎ ಮೀಸಲಾತಿ ಘೋಷಿಸಬೇಕು ಎಂದು ಆಗ್ರಹಿಸಿದ್ರು.
ಒಂದು ವೇಳೆ ಮೀಸಲಾತಿ ನೀಡದೆ ಹೋದ್ರೆ, ಸೆಪ್ಟೆಂಬರ್ 15ರ ನಂತರ ರಾಜ್ಯದ ಎಲ್ಲಾ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಎತ್ತಿನ ಬಂಡಿಗಳೊಂದಿಗೆ ತಹಶೀಲ್ದಾರ್, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅರ್ಧ ಗಂಟೆಗಳ ಕಾಲ ಹೋರಾಟ ನಡೆಸಿ, ತಹಶೀಲ್ದಾರ್, ಜಿಲ್ಲಾಧಿಕಾರಿಗಳ ಮುಖಾಂತರವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಆದರೂ ಮೀಸಲಾತಿ ನೀಡದೆ ಹೋದಲ್ಲಿ ಅ.1ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮತ್ತೆ ಉಗ್ರ ರೀತಿ ಧರಣಿ ಸತ್ಯಾಗ್ರಹ ಹೋರಾಟಕ್ಕೆ ಅಣಿಯಾಗುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹಾಗು ಮಾಜಿ ಶಾಸಕ, ಅಖಿಲ ಭಾರತ ಪಂಚಮಸಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ:ಗುಜರಾತ್ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್