ಕಲಬುರಗಿ: ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಜೆಡಿಎಸ್ಗೆ ಒಂದೂ ಸೀಟು ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾಮರಾವ್ ಸೂರನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರ್ಗಿ ಹಾಗೂ ಬೀದರ್ ಲೋಕಸಭೆಗಳನ್ನು ಜೆಡಿಎಸ್ ಬಿಟ್ಟುಕೊಡಬೇಕು. ಒಂದು ವೇಳೆ ಬಿಟ್ಟು ಕೊಡದಿದ್ದಲ್ಲಿ ಬಂಡಾಯ ಅಭ್ಯರ್ಥಿಗಳನ್ನು ನಿಲ್ಲಿಸಲಾಗುವುದು ಎಂದು ಜೆಡಿಎಸ್ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಕಲಬುರ್ಗಿಯಿಂದ ವಿಠಲ ಜಾಧವ್, ಬೀದರ್ನಿಂದ ಎಂ.ಬಿ.ಅಂಬಲಗಿ ಸ್ಪರ್ಧೆ ಮಾಡಲಿದ್ದಾರೆ. ಇದನ್ನೂ ಜೆಡಿಎಸ್ ಮತ್ತು ಕಾಂಗ್ರೆಸ್ ವರಿಷ್ಠರು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಎಚ್ಚರಿಸಿದರು.
ಈ ಮೂಲಕ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಲೋಕಸಭೆ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಕರ್ನಾಟಕ ಭಾಗದ ಜೆಡಿಎಸ್ ನಾಯಕರಲ್ಲಿ ಅಸಮಾಧಾನ ಭುಗಿಲೇಳುವಂತಾಗಿದೆ.