ಕಲಬುರಗಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದ ಅಪರಾಧಿಗೆ 2ನೇ ಅಪರ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಈತ ಜೇವರ್ಗಿ ತಾಲೂಕು ಕೋಳಕೂರು ಗ್ರಾಮದ ನಿವಾಸಿಯಾಗಿದ್ದು, ಇದೇ ಗ್ರಾಮದ ಅಪ್ರಾಪ್ತ ಬಾಲಕಿಯನ್ನು 2018ರ ಆಗಸ್ಟ್ ತಿಂಗಳಲ್ಲಿ ಅಪಹರಿಸಿ ಅತ್ಯಾಚಾರ ಮಾಡಿದ್ದ. ಈ ಹಿನ್ನೆಲೆಯಲ್ಲಿ ಜೇವರ್ಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರದ ದಿನಗಳಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು ಕೂಲಂಕಶ ತನಿಖೆ ನಡೆಸಿ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಜೊತೆಗೆ 2 ಲಕ್ಷ ರೂಪಾಯಿ ದಂಡ ಸಹ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಸಂತ್ರಸ್ತ ಬಾಲಕಿಗೆ ಜಿಲ್ಲಾ ಕಾನೂನು ನೆರವು ಸಮಿತಿಯಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.