ಕಲಬುರಗಿ:ಬ್ರಿಡ್ಜ್ ಕಮ್ ಬ್ಯಾರೇಜ್ ಕಾಮಗಾರಿ ಮಾಡಲು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಅಧಿಕಾರಿ ಮತ್ತು ಗುತ್ತಿಗೆದಾರನಿಗೆ ರೈತರು ಕ್ಲಾಸ್ ತೆಗೆದುಕೊಂಡಿದ್ದಾರೆ.
ಅಫ್ಜಲ್ಪುರ ಮತ್ತು ಜೇವರ್ಗಿ ಎರಡು ತಾಲೂಕುಗಳ ಮಧ್ಯೆ ಸಂಪರ್ಕ ಕಲ್ಪಿಸುವ ಹಾಗೂ ಸುಮಾರು 40 ಹಳ್ಳಿಗಳ ಜನ ಜಾನುವಾರುಗಳಿಗೆ ನೀರು ಒದಗಿಸುವ ನಿಟ್ಟಿನಲ್ಲಿ ಕಲ್ಲೂರ- ಚಿನ್ಮಳ್ಳಿ ಸೇತುವೆ ಮತ್ತು ಬ್ಯಾರೇಜ್ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ 50 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಆದ್ರೆ ಟೆಂಡರ್ ಆಗಿ ಹಲವು ತಿಂಗಳಾದರೂ ಇನ್ನೂ ಕಾಮಗಾರಿ ಮಾಡಿಲ್ಲ ಎಂದು ಕೆಬಿಜೆಎನ್‌ಎಲ್ ಎಇಇ ಮತ್ತು ಗುತ್ತಿಗೆದಾರನಿಗೆ ರೈತರು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡರು.
ಕಾಮಗಾರಿ ಬೇಗ ಮುಗಿಯದಿದ್ದರೆ ಬೇಸಿಗೆಯಲ್ಲಿ ರೈತರಿಗೆ ಮತ್ತು ದನಕರುಗಳಿಗೆ ನೀರಿನ ಸಮಸ್ಯೆಯಾಗಲಿದೆ. ನಿಮ್ಮಿಂದ ಆಗದಿದ್ರೆ ನಾವೇ ತಲಾ ಒಂದು ಎಕರೆ ಹೊಲ ಮಾರಿ ಬ್ರಿಡ್ಜ್ ಕಟ್ಟಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.