ಕಲಬುರಗಿ: ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 36ರ ವಿಜೇತ ಅಭ್ಯರ್ಥಿಯ ಆಯ್ಕೆಯನ್ನು ಅಸಿಂಧುಗೊಳಿಸಿ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.
ಬಿಜೆಪಿ ಬಂಡಾಯ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಜೇತರಾದ ಶಂಬುಲಿಂಗ ಬಳಬಟ್ಟಿ ಚುನಾವಣೆಯ ವೇಳೆ ತಪ್ಪು ಅಫಿಡವಿಟ್ ಸಲ್ಲಿಸಿದ್ದು ಆಯ್ಕೆ ಅಸಿಂಧುವಾಗಿದೆ. ನಾಮಪತ್ರ ಸಲ್ಲಿಸುವಾಗ ಆಸ್ತಿ, ವಿದ್ಯಾರ್ಹತೆ ಸೇರಿದಂತೆ ಅನೇಕ ಮಾಹಿತಿಯನ್ನು ಇವರು ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಬಿಜೆಪಿ ಅಭ್ಯರ್ಥಿ ಸೂರಜ್ ತಿವಾರಿ ನ್ಯಾಯಾಲಯದ ಮೊರೆ ಹೋಗಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದ ಶಂಬುಲಿಂಗ ಬಳಬಟ್ಟಿ ನಂತರದ ದಿನಗಳಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು. ಆದರೆ ಪಾಲಿಕೆ ಚುನಾವಣೆಯಲ್ಲಿ ಗೆದ್ದರೂ ಅಧಿಕಾರ ಸ್ವೀಕರಿಸಿರಲಿಲ್ಲ.
ಕಳೆದ ತಿಂಗಳಷ್ಟೇ ವಾರ್ಡ್ ಸಂಖ್ಯೆ 24 ರ ಬಿಜೆಪಿ ವಿಜೇತ ಅಭ್ಯರ್ಥಿ ಪ್ರಿಯಾಂಕಾ ಅಂಬ್ರೇಶ ಅವರು ವಯಸ್ಸಿನ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಅವರ ಆಯ್ಕೆ ಅಸಿಂಧುಗೊಳಿಸಿ ಜಿಲ್ಲಾ ನ್ಯಾಯಾಲಯ ಆದೇಶಿಸಿತ್ತು.
55 ಸದಸ್ಯ ಬಲ ಹೊಂದಿರುವ ಮಹಾನಗರ ಪಾಲಿಕೆಯಲ್ಲಿ 27 ಕಾಂಗ್ರೆಸ್, 23 ಬಿಜೆಪಿ, 4 ಜೆಡಿಎಸ್, ಓರ್ವ ಪಕ್ಷೇತರ ಅಭ್ಯರ್ಥಿ ಗೆಲವು ಸಾಧಿಸಿದ್ದರು. ಪಕ್ಷೇತರ ಅಭ್ಯರ್ಥಿಯು ನಂತರದ ದಿನಗಳಲ್ಲಿ ಬಿಜೆಪಿ ಸೇರ್ಪಡೆಯಾಗಿ ಬಿಜೆಪಿ ಸಂಖ್ಯೆ 24 ಕ್ಕೇರಿತ್ತು.
ಇದನ್ನೂ ಓದಿ: ಬೆಂಗಳೂರಲ್ಲಿ ವಾರ್ಡ್ ಪುನರ್ ರಚನೆ.. ಆಕ್ಷೇಪಣೆ ಸಲ್ಲಿಸಿದ ಕಾಂಗ್ರೆಸ್ ನಾಯಕರಿಗೆ ಹೈಕೋರ್ಟ್ ಹೇಳಿದ್ದೇನು?