ಕಲಬುರಗಿ : ವಿದೇಶಿ ಹಾಲು ಮತ್ತು ಡೈರಿ ಉತ್ಪನ್ನಗಳ ಮುಕ್ತ ಪ್ರವೇಶಕ್ಕೆ ಅವಕಾಶ ನೀಡುವ ಆರ್‌ಸಿಇಪಿ ಒಪ್ಪಂದದಿಂದ ಹೊರಬರುವಂತೆ ಒತ್ತಾಯಿಸಿ ರೈತ-ಕೃಷಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಎಸ್ವಿಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು,ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಆರ್‌ಸಿಇಪಿ ಒಪ್ಪಂದಕ್ಕೆ ಭಾರತ ಸಹಿ ಹಾಕಿದಲ್ಲಿ ಅದು ರೈತರ ಪಾಲಿನ ಮರಣ ಶಾಸನವಾಗಲಿದೆ. ರೈತ ವಿರೋಧಿಯಾಗಿರೋ ಈ ಒಪ್ಪಂದದಿಂದ ಕೇಂದ್ರ ಸರ್ಕಾರ ಕೂಡಲೇ ಹಿಂದೆ ಸರಿಯಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.