ETV Bharat / state

ಕಲಬುರಗಿ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಅಪ್ರಾಪ್ತ ಆರೋಪಿ ಅರೆಸ್ಟ್ - ಬರ್ಹಿದೆಸೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರ

ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂಬಂಧ ಅಪ್ರಾಪ್ತ ಆರೋಪಿ ಬಂಧಿಸಲಾಗಿದೆ.

kalaburagi-girl-rape-and-murder-case-minor-accused-arrested
ಕಲಬುರಗಿ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಅಪ್ರಾಪ್ತ ಆರೋಪಿ ಅರೆಸ್ಟ್
author img

By

Published : Nov 2, 2022, 9:12 PM IST

ಕಲಬುರಗಿ: ಜಿಲ್ಲೆಯ ಆಳಂದ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಓರ್ವ ಅಪ್ರಾಪ್ತ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.

ಬರ್ಹಿದೆಸೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ನಂತರ ಕೊಲೆ ಮಾಡಲಾಗಿತ್ತು. ಈ ಕೃತ್ಯ ಎಸಗಿದ ಬಂಧಿತ ಆರೋಪಿ ಕೂಡ ಅಪ್ರಾಪ್ತನಾಗಿದ್ದು, 24 ಗಂಟೆಯೊಳಗೆ ಪೊಲೀಸರು ಮಿಂಚಿನ ಕಾರ್ಯಾಚರಣೆ ಬಂಧಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಹೀನ ಕೃತ್ಯ: ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಎಳೆದೊಯ್ದು ಅತ್ಯಾಚಾರ, ಕೊಲೆ

ಘಟನೆಯ ಹಿನ್ನೆಲೆ: ಆಳಂದ‌ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಮಧ್ಯಾಹ್ನ 3 ರಿಂದ 4 ಗಂಟೆಯ ಅವಧಿಯಲ್ಲಿ 9ನೇ ತರಗತಿ ಓದುತ್ತಿದ್ದ ಬಾಲಕಿ ಮನೆಯಿಂದ ಬರ್ಹಿದೆಸೆಗೆ ಹೋಗಿದ್ದಳು. ಕಾಮುಕ ಕಬ್ಬಿನ ಗದ್ದೆಯಲ್ಲಿ ಎಳೆದೊಯ್ದು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದರು.

ನಂತರ ಎದೆಗೆ ಕಲ್ಲಿನಿಂದ ಜಜ್ಜಿ ಮತ್ತು ಕುತ್ತಿಗೆಗೆ ವೇಲ್​ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ ಆರೋಪಿ ಪರಾರಿಯಾಗಿದ್ದ. ಈ ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿದ್ದ ಆಳಂದ ಪೊಲೀಸರು ವಿಶೇಷ ತಂಡ ರಚಸಿ ತನಿಖೆ ಕೈಗೊಂಡಿದ್ದರು.

ಇದನ್ನೂ ಓದಿ: ಕಲಬುರಗಿಯಲ್ಲಿ ಅಪ್ರಾಪ್ತ ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.