ಕಲಬುರಗಿ: ಹಾವು ಕಚ್ಚಿ ರೈತ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕನಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ದುರ್ದೈವಿ ಸಿದ್ರಾಮಪ್ಪ ಪ್ರದಾನಿ (52) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿರುವಾಗ ಹಾವು ಕಚ್ಚಿದೆ. ತಕ್ಷಣ ಆತ ನಾಟಿ ಔಷಧ ಸೇವಿಸಿ, ಮನೆಗೆ ಬಂದಿದ್ದ. ನಂತರ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ರೈತ ಮೃತಪಟ್ಟಿದ್ದಾನೆ.
ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.