ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಸೋಂಕಿಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ.
50 ವರ್ಷದ ಮಹಿಳೆ ಹಾಗೂ 53 ವರ್ಷದ ಪುರುಷ ಮೃತಪಟ್ಟಿದ್ದಾರೆ. ಇಬ್ಬರೂ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಇಬ್ಬರೂ ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಇಂದು ಮತ್ತೆ 85 ಜನರಲ್ಲಿ ಸೋಂಕು ಪತ್ತೆಯಾಗಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1901ಕ್ಕೆ ಏರಿಕೆಯಾಗಿದ್ದು, 41 ಸೋಂಕಿತರು ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ.