ಕಲಬುರಗಿ: ಹಿಂದುಳಿದ ವರ್ಗದ ಬಗ್ಗೆ ಮಾತನಾಡಲು ಕಾಂಗ್ರೆಸ್ನವರಿಗೆ ನೈತಿಕತೆ ಇಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್ನವರು ಏನೂ ಮಾಡಿಲ್ಲ. ಪ್ರಧಾನಿ ಮೋದಿಯವರು ಹಿಂದುಳಿದ ವರ್ಗಗಳ ಆಯೋಗ ರಚಿಸಿದರು. ಈ ವೇಳೆ ಕಾಂಗ್ರೆಸ್ಸಿಗರೇ ಆಯೋಗಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕರು ಹಿಂದುಳಿದ ವರ್ಗಗಳ ವಿರೋಧಿಗಳು. ಹೀಗಾಗಿ ಅವರಿಗೆ ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಹಿಂದುಳಿದ ವರ್ಗದ ಜನ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.