ಕಲಬುರಗಿ: ರೈತ ಕೃಷಿ ಕಾಯ್ದೆಗಳನ್ನು ವಿರೋಧಿ ಕರೆ ನೀಡಿರುವ ಭಾರತ ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಯುಕ್ತ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ವೇಳೆ ಪೊಲೀಸರು 30 ಕ್ಕೂ ಹೆಚ್ಚು ಜನ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಕೇಂದ್ರ ಬಸ್ ನಿಲ್ದಾಣದ ಮುಂದೆ ಬೆಳಗ್ಗೆಯಿಂದಲೇ ವಿವಿಧ ಸಂಘಟನೆಗಳ ಕಾರ್ಯಕರ್ತರು ಬಂದ್ ಮಾಡುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಬಸ್, ಆಟೋ ಸಂಚಾರ ಆರಂಭವಾಗಿದ್ದು, ವ್ಯಾಪಾರ ವಹಿವಾಟು ಸಹ ಎಂದಿನಂತಿದೆ.
ಓದಿ: ನಂಜನಗೂಡು ಪಂಚ ರಥೋತ್ಸವದಲ್ಲಿ ವಿಘ್ನ... ತೇರು ಎಳೆಯುವಾಗ ಪುಡಿಯಾದ ಚಕ್ರ!
30 ಕ್ಕೂ ಹೆಚ್ಚು ಜನ ಕಾರ್ಯಕರ್ತರು ವಶಕ್ಕೆ :
ಬಂದ್ ಹಿನ್ನೆಲೆ ಕೇಂದ್ರ ಬಸ್ ನಿಲ್ದಾಣದ ಸೇರಿದಂತೆ ನಗರದ ಪ್ರಮುಖ ವೃತ್ತಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಬಂದ್ಗೆ ಪೊಲೀಸ್ ಇಲಾಖೆ ಅನುಮತಿ ನೀಡಿಲ್ಲ. ಆದರೂ ಕಾರ್ಯಕರ್ತರು ಬಂದ್ ಆಚರಣೆ ಮಾಡುತ್ತಿದ್ದಾರೆ. ಸದ್ಯ ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದ ರೈತಪರ, ಕಾರ್ಮಿಕಪರ, ಮಹಿಳಾ ಸಂಘನೆಯ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.