ಕಲಬುರಗಿ: ದೇಶಕ್ಕೆ ಡಾ ಬಿ ಆರ್ ಅಂಬೇಡ್ಕರ್ ಅವರ ಕೊಡುಗೆ ಅಪಾರ. ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಅವರು ಹಾಕಿಕೊಟ್ಟಿರುವ ಮಾರ್ಗದಲ್ಲಿ ನಾವೆಲ್ಲರು ಸಾಗಬೇಕಿದೆ ಎಂದು ಜಿಲ್ಲಾಧಿಕಾರಿ ವಿ ವಿ ಜ್ಯೋತ್ಸ್ನಾ ಕರೆ ನೀಡಿದರು.
ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ನಗರದ ಜಗತ್ ವೃತ್ತದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ಇದೇ ವೇಳೆ ನಗರ ಪೊಲೀಸ್ ಆಯುಕ್ತ ಎನ್. ಸತೀಶ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿಮಿ ಮರಿಯಮ್ ಜಾರ್ಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಅಲ್ಲಾಭಕ್ಷ ಸಹ ಅಂಬೇಡ್ಕರ್ ಅವರನ್ನು ಸ್ಮರಿಸಿ ಗೌರವ ಸಲ್ಲಿಸಿದರು.
ಈ ಸುದ್ದಿಯನ್ನೂ ಓದಿ: ವಿಧಾನಸೌಧದಲ್ಲಿ ಡಾ.ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಸಿಎಂ
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಪಂಚಶೀಲ ಧ್ವಜಾರೋಹಣ ಮತ್ತು ಜಿಲ್ಲಾ ಪಂಚಾಯತ್ ಸಿ.ಇ.ಓ. ಡಾ.ಪಿ. ರಾಜಾ ಅವರು ನೀಲ ಧ್ವಜಾರೋಹಣ ಮಾಡಿದರು. ಸಿದ್ದಾರ್ಥ ವಿಹಾರ ಟ್ರಸ್ಟ್ನ ಪೂಜ್ಯ ಸಂಗಾನಂದ ಭಂತೇಜಿ ಅವರು ಸಂವಿಧಾನ ಶಿಲ್ಪಿಗೆ ಬುದ್ಧ ವಂದನೆ ಸಲ್ಲಿಸಿದರು.