ಕೊಪ್ಪಳ : ಜಿಲ್ಲೆಯಲ್ಲಿ ಇಂದು 13 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 13,390 ಕ್ಕೆ ಏರಿಕೆಯಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಗಂಗಾವತಿ ತಾಲೂಕಿನಲ್ಲಿ 09, ಕೊಪ್ಪಳ ತಾಲೂಕಿನಲ್ಲಿ 03 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 01 ಪ್ರಕರಣ ಸೇರಿ ಇಂದು ಒಟ್ಟು13 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 282 ಸೋಂಕಿತರು ಮೃತಪಟ್ಟಿದ್ದಾರೆ. ಇಂದು 33 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 12,852 ಜನರು ಗುಣಮುಖರಾಗಿದ್ದಾರೆ. 235 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಸೋಂಕಿತರಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.