ಕಲಬುರಗಿ: ಪ್ರವಾಹ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ತುರ್ತು ಸಭೆ ನಡೆಸಿದ್ದಾರೆ.
ಮಹಾರಾಷ್ಟ್ರದ ಡ್ಯಾಂಗಳಿಂದ ಪ್ರಸಕ್ತ 5 ಲಕ್ಷ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ನಾಳೆ ಹೆಚ್ಚುವರಿಯಾಗಿ ಇನ್ನೂ 2,50,000 ಕ್ಯೂಸೆಕ್ಸ್ ನೀರು ಹರಿದು ಬರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಭೀಮಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಹೆಚ್ಚಾಗುವ ಸಾಧ್ಯತೆಯಿದ್ದು, ಆದರಿಂದ ಇಂದು ಇಡೀ ರಾತ್ರಿ ಮಿನಿ ವಿಧಾನಸೌಧದಲ್ಲಿ ಇದ್ದು, ಪರಿಸ್ಥಿತಿ ನಿಭಾಯಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಹಶೀಲ್ದಾರ್, ಪಿಡಿಒ, ಗ್ರಾಮಲೆಕ್ಕಿಗರೊಂದಿಗೆ ಸಮನ್ವಯ ಸಾಧಿಸಿ ಕೆಲಸ ಮಾಡಲು ಸಲಹೆ ನೀಡಿದ ಅವರು, ಪ್ರವಾಹಕ್ಕೀಡಾಗುವ ಗ್ರಾಮಗಳ ಸ್ಥಳಾಂತರಕ್ಕೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ರಕ್ಷಣೆಗಾಗಿ 40 ರಿಂದ 50 ಬೋಟ್ ಗಳು, ಆಂಬ್ಯುಲೆನ್ಸ್ ಗಳ, ಕ್ರೂಸರ್ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಪ್ರವಾಹ ಸಂತ್ರಸ್ತರಿಗೆ ಆಹಾರ, ಔಷಧಗಳ ಕಿಟ್ ನೀಡಲು, ಪರಿಸ್ಥಿತಿ ನಿಭಾಯಿಸಲು ವಿವಿಧ ನೋಡಲ್ ಅಧಿಕಾರಿಗಳ ನೇಮಕ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.