ETV Bharat / state

ದೀಪಾವಳಿಗೆ ಹಸಿರು ಪಟಾಕಿ ಮಾತ್ರ ಸಿಡಿಸಬೇಕು.. ತಪ್ಪಿದರೆ ಕಾನೂನು ಕ್ರಮ; ಡಿಸಿ ಜ್ಯೋತ್ಸ್ನಾ

author img

By

Published : Nov 11, 2020, 10:45 PM IST

ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ಮಾಡಲು ಮಾರಾಟಗಾರರರಿಗೆ ಪರವಾನಿಗೆ ಅಥವಾ ನಿರಾಕ್ಷೇಪಣಾ ಪ್ರಮಾಣಪತ್ರ ನೀಡುವಾಗ ಸಂಬಂಧಪಟ್ಟ ಇಲಾಖೆ ಹಾಗೂ ಪ್ರಾಧಿಕಾರಗಳು ತಪ್ಪದೇ ಮಾರಾಟಗಾರರಿಂದ ಹಸಿರು ಪಟಾಕಿ ಮಾತ್ರ ಮಾರಾಟ ಮಾಡುವುದಾಗಿ ಮುಚ್ಚಳಿಕೆ ಪತ್ರ ಬರೆಯಬೇಕು.

Kalburgi DC
ವಿ.ವಿ.ಜ್ಯೋತ್ಸ್ನಾ

ಕಲಬುರಗಿ: ದೀಪಾವಳಿ ಹಬ್ಬಕ್ಕೆ ಕೇವಲ ಹಸಿರು ಪಟಾಕಿ ಮಾತ್ರ ಸಿಡಿಸಬೇಕು. ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ಇದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.

ನವದೆಹಲಿಯ ಪ್ರಧಾನ ಹಸಿರು ನ್ಯಾಯ ಪೀಠದ ನಿರ್ದೇಶನ ಹಾಗೂ ಕೋವಿಡ್-19 ನಿಯಂತ್ರಣ ನಿಟ್ಟಿನಲ್ಲಿ ಮುನ್ನೆಚ್ಚರಿಕೆಯಾಗಿ ದೀಪಾವಳಿ ಹಬ್ಬವನ್ನು ಸರಳ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸುವಂತೆ ನವೆಂಬರ 6 ರಂದು ಆದೇಶ ಹೊರಡಿಸಲಾಗಿತ್ತು. ಇದೀಗ ಹೆಚ್ಚುವರಿಯಾಗಿ ಹಸಿರು ಪಟಾಕಿ ಸಿಡಿಸಲು ಸಮಯ ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದೀಪಾವಳಿ ಹಬ್ಬ ಆಚರಣೆ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳು ನ. 9 ರಿಂದ 30ರ ಮಧ್ಯರಾತ್ರಿವರಗೆ ಚಾಲ್ತಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.

ಪರವಾನಿಗೆ ಮುನ್ನ ಮುಚ್ಚಳಿಕೆ ಪತ್ರ ಸಲ್ಲಿಸಬೇಕು:

ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ಮಾಡಲು ಮಾರಾಟಗಾರರರಿಗೆ ಪರವಾನಿಗೆ ಅಥವಾ ನಿರಾಕ್ಷೇಪಣಾ ಪ್ರಮಾಣಪತ್ರ ನೀಡುವಾಗ ಸಂಬಂಧಪಟ್ಟ ಇಲಾಖೆ ಹಾಗೂ ಪ್ರಾಧಿಕಾರಗಳು ತಪ್ಪದೇ ಮಾರಾಟಗಾರರಿಂದ ಹಸಿರು ಪಟಾಕಿ ಮಾತ್ರ ಮಾರಾಟ ಮಾಡುವುದಾಗಿ ಹಾಗೂ ಮಾರ್ಗಸೂಚಿ ಉಲ್ಲಂಘಿಸಿದ್ದಲ್ಲಿ ಸರ್ಕಾರವು ಕಾನೂನು ರೀತಿಯ ಕ್ರಮ ಕೈಗೊಳ್ಳಲು ತಾವು ಬದ್ಧರಾಗಿರುವುದಾಗಿ ಮುಚ್ಚಳಿಕೆ ಪತ್ರ ಪಡೆಯಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ವಿ.ವಿ. ಜ್ಯೋತ್ಸ್ನಾ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.