ETV Bharat / state

ಕಲಬುರಗಿ: ಪರಿಹಾರ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ - DC visits

ಜೇವರ್ಗಿ ತಾಲೂಕಿನ ನರಿಬೋಳ ಪರಿಹಾರ ಕೇಂದ್ರಕ್ಕೆ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ನ್ಸಾ ಭೇಟಿ ನೀಡಿ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದರು.

DC visits care centers
ಕಲಬುರಗಿ: ಕಾಳಜಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ
author img

By

Published : Oct 24, 2020, 9:02 AM IST

ಕಲಬುರಗಿ: ಭೀಮಾ ನದಿ ಪ್ರವಾಹದಿಂದ ಸಂತ್ರಸ್ತರಿಗಾಗಿ ತೆರೆಯಲಾದ ಪರಿಹಾರ ಕೇಂದ್ರಗಳಿಗೆ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ನ್ಸಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಲಬುರಗಿ: ಪರಿಹಾರ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಜೇವರ್ಗಿ ತಾಲೂಕಿನ ನರಿಬೋಳ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದ ಡಿಸಿ, ಕೇಂದ್ರದಲ್ಲಿ ನೀಡಲಾಗುತ್ತಿರುವ ಊಟೋಪಚಾರ ಮತ್ತು ಮೂಲಭೂತ ಸೌಕರ್ಯಗಳ ಬಗ್ಗೆ ಸಂತ್ರಸ್ತರಿಂದ ಮಾಹಿತಿ ಪಡೆದರು.

ಭೀಮಾ ನದಿ ಪ್ರವಾಹ ತಗ್ಗಿದ್ದರಿಂದ ಮುಂದಿನ ದಿನಗಳಲ್ಲಿ ಪರಿಹಾರ ಕೇಂದ್ರದಿಂದ ಮನೆಗೆ ಹೋಗುವ ನಿರಾಶ್ರಿತರು ಮೊದಲು ಮನೆಯ ಸುತ್ತಮುತ್ತ ಸ್ವಚ್ಛತೆ ಕಡೆಗೆ ಗಮನ ಹರಿಸಬೇಕು. ಗ್ರಾಮದಲ್ಲಿ ನೀರು ನಿಂತಿದ್ದಲ್ಲಿ ಅಥವಾ ಚರಂಡಿಗಳು ಮುಚ್ಚಿ ಹೋಗಿದ್ದಲ್ಲಿ ಪಿ.ಡಿ.ಒ. ಅವರ ಗಮನಕ್ಕೆ ತಂದಲ್ಲಿ ಸಮಸ್ಯೆ ಬಗೆಹರಿಸಲಾಗುವುದು. ಪ್ರವಾಹದಿಂದ ಸಾಂಕ್ರಾಮಿಕ ರೋಗ ಬರುವ ಸಾಧ್ಯತೆಯಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮದಲ್ಲಿ ಆರೋಗ್ಯ ಇಲಾಖೆಯಿಂದ ಈಗಾಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಮನೆ ಸುತ್ತಮುತ್ತ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗದಂತೆ ಎಚ್ಚರ ವಹಿಸಬೇಕು. ಕುಡಿಯುವ ನೀರನ್ನು ಕಾಯಿಸಿ ಆರಿಸಿ ಕುಡಿಯಬೇಕು, ಸ್ಥಳೀಯ ಗ್ರಾಮ ಪಂಚಾಯಿತಿಯ ಸಿಬ್ಬಂದಿ ನಿಮಗೆ ಎಲ್ಲಾ ರೀತಿಯ ಸಹಕಾರ ನೀಡಲಿದ್ದಾರೆ. ಇನ್ನು ಪರಿಹಾರ ಕೇಂದ್ರದಲ್ಲಿ ಯಾರಿಗಾದರೂ ಕೋವಿಡ್ ಲಕ್ಷಣಗಳಿದ್ದಲ್ಲಿ ಕೇಂದ್ರಕ್ಕೆ ಭೇಟಿ ನೀಡುವ ವೈದ್ಯರಿಗೆ ತಿಳಿಸಿ ಅಗತ್ಯ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.