ETV Bharat / state

'ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ'.. ಗಡಿ ಹಳ್ಳಿಯಲ್ಲೇ ವಾಸ್ತವ್ಯ ಹೂಡಲಿರುವ ಕಲಬುರಗಿ ಡಿಸಿ.. - ಕಲಬುರಗಿಯಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ

ಗ್ರಾಮ ವಾಸ್ತವ್ಯದ ಭಾಗವಾಗಿ ಆಧಾರ್ ಕಾರ್ಡ್ ಅನುಕೂಲತೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಆನ್‍ಲೈನ್ ಮುಖಾಂತರ ಪಡೆಯುವ ಬಗ್ಗೆ ನಿರಂತರ ಮತದಾರರ ಪಟ್ಟಿ ಪರಿಷ್ಕರಣೆ, ಅತಿವೃಷ್ಠಿ-ಅನಾವೃಷ್ಠಿ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗೃತೆ ಕ್ರಮ ಸೇರಿದಂತೆ ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ವಿವಿಧ ಇಲಾಖೆಗಳ ಸವಲತ್ತುಗಳ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸಲಾಗುತ್ತದೆ..

kalburgi
ಜಿಲ್ಲಾಧಿಕಾರಿ ವಿ.ವಿ ಜೋತ್ಸ್ಯಾ
author img

By

Published : Feb 19, 2021, 8:50 AM IST

ಕಲಬುರಗಿ : ಹೆಣ್ಣು ಮಕ್ಕಳ ಮಾರಾಟ ಪ್ರಕರಣ ಹಾಗೂ ಒಂದು ಕಾಲದಲ್ಲಿ ನಕ್ಸಲರ ಅಡಗುತಾಣವೆಂದೇ ಕುಖ್ಯಾತಿ ಪಡೆದಿದ್ದ ಆಂಧ್ರ ಗಡಿ ಪ್ರದೇಶ ಕುಂಚಾವರಂ ಗ್ರಾಮದಲ್ಲಿ ಜಿಲ್ಲಾಡಳಿತ ವಾಸ್ತವ್ಯ ಹೂಡಲಿದೆ.

ಅನಕ್ಷರತೆ ತಾಂಡವವಾಡುತ್ತಿರುವ ಈ ಗ್ರಾಮದಲ್ಲಿ ಸರ್ಕಾರದ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕುಂಚಾವರಂನಲ್ಲಿ ವಾಸ್ತವ್ಯ ಮಾಡುವುದಾಗಿ ಜಿಲ್ಲಾಧಿಕಾರಿ ವಿ ವಿ ಜೋತ್ಸ್ಯಾ ತಿಳಿಸಿದ್ದಾರೆ. ಗ್ರಾಮೀಣ ಜನರ ಹತ್ತು-ಹಲವಾರು ಕುಂದು-ಕೊರತೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲು ರಾಜ್ಯ ಸರ್ಕಾರದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ ಪರಿಕಲ್ಪನೆ ಜಾರಿಗೆ ತಂದಿದೆ. ಇದರ ಭಾಗವಾಗಿ ಜಿಲ್ಲಾಧಿಕಾರಿ ವಿ ವಿ ಜ್ಯೋತ್ಸ್ನಾ ಅವರು ಫೆಬ್ರವರಿ 20 ಶನಿವಾರ ಚಿಂಚೋಳಿ ತಾಲೂಕಿನ ಕುಂಚಾವರಂನಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ನಾಳೆ ಬೆಳಗ್ಗೆ 10ರಿಂದ ಸಾಯಂಕಾಲ 5 ಗಂಟೆವರೆಗೆ ಗ್ರಾಮದಲ್ಲಿದ್ದು, ಜನರ ಅಹವಾಲು ಸ್ವೀಕರಿಸಲಿದ್ದಾರೆ. ಜಿಲ್ಲಾಧಿಕಾರಿಗಳೊಂದಿಗೆ ಸೇಡಂ ಸಹಾಯಕ ಆಯುಕ್ತರು, ಚಿಂಚೋಳಿ ತಾಲೂಕಿನ ತಹಶೀಲ್ದಾರ್ ಸೇರಿ ಕಂದಾಯ ಇಲಾಖೆಯ ಇತರೆ ಅಧಿಕಾರಿಗಳು ಉಪಸ್ಥಿತರಿರುವರು, ನಾಳೆ ರಾತ್ರಿ ಗ್ರಾಮದಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.

ಸ್ಥಳದಲ್ಲಿಯೇ ಪರಿಹಾರ : ಗ್ರಾಮ ವಾಸ್ತವ್ಯದ ಹಿನ್ನೆಲೆ ಜಿಲ್ಲಾಧಿಕಾರಿಗಳು ಎಲ್ಲಾ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್ ದೊರಕಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲಿದ್ದಾರೆ. ಗುಡಿಸಲು ರಹಿತ ವಾಸದ ಮನೆ ನಿರ್ಮಾಣ ಕುರಿತು ಕ್ರಮವಹಿಸಲಿದ್ದಾರೆ. ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸಲಿದ್ದಾರೆ.

ಗ್ರಾಮದಲ್ಲಿ ಸ್ಮಶಾನಭೂಮಿ ಲಭ್ಯತೆ ಮತ್ತು ಆಶ್ರಯ ಯೋಜನೆಯಡಿ ಅವಶ್ಯಕತೆಯಿದ್ದಲ್ಲಿ ಲಭ್ಯ ಜಮೀನನ್ನು ಕಾಯ್ದಿರಿಸಲು ಆದೇಶಿಸಲಾಗಿದೆ. ಕಂದಾಯ ಗ್ರಾಮಗಳ ರಚನೆ ಸೇರಿ ಗ್ರಾಮದಲ್ಲಿನ ಇತರೆ ಕುಂದುಕೊರತೆಗಳನ್ನು ಸಹ ಆಲಿಸಿ ಪರಿಹಾರ ಕಲ್ಪಿಸಲಿದ್ದಾರೆ.

ಗ್ರಾಮ ವಾಸ್ತವ್ಯದ ಭಾಗವಾಗಿ ಆಧಾರ್ ಕಾರ್ಡ್ ಅನುಕೂಲತೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಆನ್‍ಲೈನ್ ಮುಖಾಂತರ ಪಡೆಯುವ ಬಗ್ಗೆ ನಿರಂತರ ಮತದಾರರ ಪಟ್ಟಿ ಪರಿಷ್ಕರಣೆ, ಅತಿವೃಷ್ಠಿ-ಅನಾವೃಷ್ಠಿ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗೃತೆ ಕ್ರಮ ಸೇರಿದಂತೆ ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ವಿವಿಧ ಇಲಾಖೆಗಳ ಸವಲತ್ತುಗಳ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸಲಾಗುತ್ತದೆ.

ಜತೆಗೆ ಗ್ರಾಮದಲ್ಲಿರುವ ಸರ್ಕಾರಿ ವಸತಿ ನಿಲಯ, ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗಳಿಗೂ ಜಿಲ್ಲಾಧಿಕಾರಿ ವಿ ವಿ ಜ್ಯೋತ್ಸ್ನಾ ಅವರು ಭೇಟಿ ನೀಡಿ ಶಿಕ್ಷಣ ಬೋಧನೆ, ಆಹಾರ ಮತ್ತು ಕಲಿಕೆಯ ಗುಣಮಟ್ಟ ಪರಿಶೀಲಿಸಲಿದ್ದಾರೆ.

ತಹಶೀಲ್ದಾರರಿಂದಲೂ ಗ್ರಾಮ ವಾಸ್ತವ್ಯ : ಜಿಲ್ಲಾಧಿಕಾರಿಗಳ ರೀತಿ ಮಹಾರಾಷ್ಟ್ರದ ಗಡಿಯ ಆಳಂದ ತಾಲೂಕಿನ ನಂದಗೂರ ಗ್ರಾಮದಲ್ಲಿ ಕಲಬುರಗಿ ಸಹಾಯಕ ಆಯುಕ್ತರು ಮತ್ತು ಆಳಂದ ತಹಶೀಲ್ದಾರರು ಜಂಟಿಯಾಗಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಉಳಿದಂತೆ ಸೇಡಂ ತಾಲೂಕಿನ ಗೌಡನಹಳ್ಳಿ, ಚಿತ್ತಾಪೂರ ತಾಲೂಕಿನ ಗುಂಡಗುರ್ತಿ, ಶಹಾಬಾದ ತಾಲೂಕಿನ ಅಲದಿಹಾಳ, ಕಲಬುರಗಿ ತಾಲೂಕಿನ ಅವರಾದ(ಬಿ), ಕಮಲಾಪುರ ತಾಲೂಕಿನ ಡೊಂಗರಗಾಂವ, ಕಾಳಗಿ ತಾಲೂಕಿನ ರಟಕಲ್, ಅಫಜಲಪೂರ ತಾಲೂಕಿನ ರೇವೂರ(ಬಿ), ಜೇವರ್ಗಿ ತಾಲೂಕಿನ ರಾಜವಾಳ ಹಾಗೂ ಯಡ್ರಾಮಿ ತಾಲೂಕಿನ ಮಂಗಳೂರ ಗ್ರಾಮದಲ್ಲಿ ಆಯಾ ತಾಲೂಕಿನ ತಹಶೀಲ್ದಾರರು ಸಾರ್ವಜನಿಕರ ಕುಂದುಕೊರತೆಗಳನ್ನು ಬಗೆಹರಿಸಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.