ETV Bharat / state

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಆರಂಭ

ಈಶಾನ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಮತ ಎಣಿಕೆಗಾಗಿ ಸುಮಾರು 120 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ‌.

kalburgi
ಈಶಾನ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಆರಂಭ..
author img

By

Published : Nov 10, 2020, 9:34 AM IST

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಕಲಬುರಗಿ ವಿವಿಯ ಗಣಿತ ವಿಭಾಗದಲ್ಲಿ ಮತ ಎಣಿಕೆ ನಡೆಯುತ್ತಿದೆ. ಚುನಾವಣಾಧಿಕಾರಿ ಎನ್.ವಿ. ಪ್ರಸಾದ್ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ತೆರೆಯಲಾಯಿತು.

ಈಶಾನ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಆರಂಭ..

ಮತ ಎಣಿಕೆ ಕೇದ್ರದಲ್ಲಿ 7 ಟೇಬಲ್ ಅಳವಡಿಕೆ ಮಾಡಲಾಗಿದ್ದು, ಮತ ಎಣಿಕೆಗಾಗಿ ಸುಮಾರು 120 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಭದ್ರತೆಗಾಗಿ ಒಟ್ಟು 100 ಮಂದಿ ಪೊಲೀಸ್​ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಅ.28 ರಂದು ನಡೆದ ಮತದಾನದಲ್ಲಿ ಶೇ.73.32 ರಷ್ಟು ಮತದಾನ ನಡೆದಿತ್ತು. 21,437 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು‌.

ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ, ಕಾಂಗ್ರೆಸ್​ನ ಶರಣಪ್ಪ ಮಟ್ಟೂರ, ಜೆಡಿಎಸ್​ನ ತಿಮ್ಮಯ್ಯ ಪುರ್ಲೆ, ವಾಟಾಳ್ ನಾಗರಾಜ್, ಚಂದ್ರಕಾಂತ್ ಸಿಂಗೆ ಸೇರಿ ಐವರು ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ‌. ಇಂದು ತಡರಾತ್ರಿ ವೇಳೆಗೆ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.