ಕಲಬುರಗಿ: ಮನೆಗಳ್ಳತನ, ರಾತ್ರಿ ಒಂಟಿ ಬೈಕ್ ಸವಾರರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಫರತಾಬಾದ್ ಪೊಲೀಸರು ಬಂಧಿಸಿದ್ದಾರೆ.
ಇಲ್ಲಿನ ಗುಬ್ಬಿ ಕಾಲೋನಿ ನಿವಾಸಿ ಆಕಾಶ ಗುತ್ತೆದಾರ (24) ಹಾಗೂ ಆದರ್ಶ ನಗರ ನಿವಾಸಿ ಆಸೀಫ್ ಪಟೇಲ್ (19) ಬಂಧಿತ ಆರೋಪಿಗಳು. ಬಂಧಿತರಿಂದ 20 ಗ್ರಾಂ ಚಿನ್ನದ ಮಂಗಳಸೂತ್ರ, 2 ಮೊಬೈಲ್, ಎರಡು ಸಾವಿರ ನಗದು ಹಾಗೂ ಬೈಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮನೆ ಕಳ್ಳತನ, ರಾತ್ರಿ ಒಂಟಿ ಬೈಕ್ ಸವಾರರನ್ನು ಅಡ್ಡಗಟ್ಟಿ ದರೋಡೆ ಮಾಡುವುದನ್ನು ಆರೋಪಿಗಳು ರೂಡಿಸಿಕೊಂಡಿದ್ದು, ಹಲವು ಪ್ರಕರಣಗಳಲ್ಲಿ ಆರೋಪಿಗಳು ಪೊಲೀಸರಿಗೆ ಬೇಕಾಗಿದ್ದರು. ಈ ಕುರಿತು ಫರತಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬೈಕ್ ಸವಾರರ ದರೋಡೆ, ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ - Kalburgi latest news
ಕಲಬುರಗಿ ನಗರದಲ್ಲಿ ಮನೆಗಳ್ಳತನ ಹಾಗೂ ಬೈಕ್ ಸವಾರರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.