ಕಲಬುರಗಿ: ಎಸ್ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಬೇಕೇ? ಅಥವಾ ಬೇಡವೇ? ಎಂಬ ಬಗ್ಗೆ ರಾಜ್ಯ ಸರ್ಕಾರ ಗೊಂದಲದಲ್ಲಿರುವಾಗಲೇ ಕಲಬುರಗಿ ಜಿಲ್ಲೆಯ ಅನೇಕ ವಿದ್ಯಾರ್ಥಿಗಳು ಪರೀಕ್ಷೆ ನಡೆಸುವುದು ಬೇಡ ಎಂದು ಮನವಿ ಮಾಡಿದ್ದಾರೆ.
ಕೇಂದ್ರ ಸರ್ಕಾರ ಈಗಾಗಲೇ ಸಿಬಿಎಸ್ಇ ಪರೀಕ್ಷೆ ರದ್ದು ಮಾಡಿದ್ದು, ವಿದ್ಯಾರ್ಥಿಗಳು ಸಂಪೂರ್ಣ ಸಮಯವನ್ನು ನೀಟ್, ಜೆಇಇ ಪರೀಕ್ಷೆ ಸಿದ್ದತೆಗೆ ಬಳಸಿಕೊಂಡಿದ್ದಾರೆ. ಆದರೆ ರಾಜ್ಯ ಸರ್ಕಾರ ಪರೀಕ್ಷೆ ನಡೆಸಿದ್ರೆ ನಮಗೆ ನೀಟ್, ಜೆಇಇ ಹಾಗು ಸಿಇಟಿ ಪರೀಕ್ಷೆಗೆ ಹೆಚ್ಚಿನ ಒತ್ತು ನೀಡಲು ಸಮಯಾವಕಾಶ ಸಿಗುವುದಿಲ್ಲ ಎನ್ನುತ್ತಿದ್ದಾರೆ.
ಇದೇ ವೇಳೆ, ನೆಟ್‌ವರ್ಕ್ ಸಮಸ್ಯೆ, ಸ್ಮಾರ್ಟ್ ಫೋನ್ ತೆಗೆದುಕೊಳ್ಳಲಾಗದ ಅನೇಕ ವಿದ್ಯಾರ್ಥಿಗಳು ಆನ್‌ಲೈನ್ ಕ್ಲಾಸ್ನಿಂದ ವಂಚಿತರಾಗಿದ್ದಾರೆ. ಹೀಗಿರುವಾಗ ಪರೀಕ್ಷೆ ನಡೆಸಿದರೆ ವಿದ್ಯಾರ್ಥಿಗಳಿಗೆ ಹಿನ್ನೆಡೆಯಾಗಲಿದೆ. ಹೀಗಾಗಿ, ಸಿಬಿಎಸ್ಇಯಂತೆ ರಾಜ್ಯ ಸರ್ಕಾರ ಕೂಡಾ ಪರೀಕ್ಷೆ ರದ್ದುಪಡಿಸಲಿ ಎಂದು ಹಲವು ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿ ಪರ ಸಂಘಟನೆಯ ಮುಖ್ಯಸ್ಥರು ಒತ್ತಾಯಿಸಿದ್ದಾರೆ.