ಕಲಬುರಗಿ : ಮಂಗವೊಂದರ ಸಾವಿಗೆ ಇಡೀ ಗ್ರಾಮವೇ ಕಂಬನಿ ಮಿಡಿದಿದೆ. ಗ್ರಾಮಸ್ಥರು ಕೋತಿಗೆ ಶಾಸ್ತ್ರೋಕ್ತವಾಗಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಖಾದ್ಯಾಪುರದಲ್ಲಿ ವಿದ್ಯುತ್ ಸ್ಪರ್ಶಸಿ ಮಂಗವೊಂದು ಮೃತಪಟ್ಟಿತ್ತು. ಆಗ ಜನರೆಲ್ಲ ಸೇರಿ ದುಡ್ಡು ಸಂಗ್ರಹಿಸಿ ಗ್ರಾಮದ ತುಂಬೆಲ್ಲ ಮೆರವಣಿಗೆ ಮಾಡಿದ ಬಳಿಕ ಧಾರ್ಮಿಕ ವಿಧಿ-ವಿಧಾನದಂತೆ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.
ಪ್ರಾಣಿಗಳೇನಾದರೂ ಸಾವನ್ನಪ್ಪಿದರೆ ಮೂಗು ಮುಚ್ಚಿಕೊಂಡು ಹೋಗುವ ಜನರ ನಡುವೆ ಖಾದ್ಯಾಪುರ ಗ್ರಾಮಸ್ಥರ ಪ್ರಾಣಿ ಪ್ರೇಮ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಮಂಗನಿಗೆ ಅಂತ್ಯಸಂಸ್ಕಾರ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.