ಕಲಬುರಗಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಿನ್ನಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಬುರಗಿ ನಗರಕ್ಕೆ ಆಗಮಿಸಿದ್ದಾರೆ. ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಕಲಬುರಗಿಯ ಸರಡಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿಎಂ, ಎಸ್.ವಿ.ಪಿ ವೃತ್ತಕ್ಕೆ ತೆರಳಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಲ್ಯಾಣ ನಾಡಿನ ಉತ್ಸವಕ್ಕೆ ಚಾಲನೆ ನೀಡಿದರು.
ಇದನ್ನೂ ಓದಿ:ಕಲ್ಯಾಣ ನಾಡಿನಲ್ಲಿ ಅಮೃತ ಮಹೋತ್ಸವಕ್ಕೆ ಸಂಭ್ರಮದ ಕಳೆ.. ಕಲಾವಿದರ ಕಲರವಕ್ಕೆ ಮನಸೋತ ಕಲಬುರಗಿ ಮಂದಿ
ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ತಳವಾರ ಸಮುದಾಯದವರು ಕಪ್ಪು ಪಟ್ಟಿ ಪ್ರದರ್ಶನ ಮಾಡಿದರು. ತಳವಾರ ಸಮುದಾಯವನ್ನ ಎಸ್ಟಿಗೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಕಪ್ಪು ಪಟ್ಟಿ ಪ್ರದರ್ಶನ ಮಾಡಲಾಯಿತು. ತಕ್ಷಣ ಸ್ಥಳದಲ್ಲಿದ್ದ ಪೊಲೀಸರು ಅವರನ್ನು ವಶಕ್ಕೆ ಪಡೆದು ಕರೆದೊಯ್ದರು.
ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸಿಎಂ ಬಸವರಾಜ ಬೊಮ್ಮಾಯಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವರು.
ಇದನ್ನೂ ಓದಿ: ಕಲ್ಯಾಣ ಕರ್ನಾಟಕದಲ್ಲಿ ಹಬ್ಬದ ಸಂಭ್ರಮ: ಸಿಎಂ ಸ್ವಾಗತಕ್ಕೆ ಭರಪೂರ ಸಿದ್ಧತೆ