ETV Bharat / state

ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವ... ಸರಳ ಆಚರಣೆಗೆ ಡಿಸಿ ಸೂಚನೆ - kalyana karnataka

ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವವನ್ನು ಆಚರಿಸಲಾಗುತ್ತಿದ್ದು, ಕೋವಿಡ್-19 ಹಿನ್ನೆಲೆ ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಆಚರಿಸಬೇಕೆಂದು ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಸೂಚಿಸಿದ್ದಾರೆ.

kalyana Karnataka Festival on september 17th
ಸೆ. 17ರಂದು ಕಲ್ಯಾಣ ಕರ್ನಾಟಕ ಉತ್ಸವ...ಮುಂಜಾಗೃತಾ ಕ್ರಮಗಳೊಂದಿಗೆ ಸರಳ ಆಚರಣೆಗೆ ಡಿಸಿ ಸೂಚನೆ
author img

By

Published : Sep 9, 2020, 10:32 AM IST

ಕಲಬುರಗಿ: ಹೈದರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕವನ್ನಾಗಿ ಮರು ನಾಮಕರಣ ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವವನ್ನು ಆಚರಿಸಲಾಗುತ್ತಿದೆ. ಕೋವಿಡ್-19 ಹಿನ್ನೆಲೆ ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಸಂಭ್ರಮವನ್ನು ಆಚರಿಸಬೇಕೆಂದು ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಸೂಚಿಸಿದ್ದಾರೆ.

meeting
ಕಲ್ಯಾಣ ಕರ್ನಾಟಕ ಉತ್ಸವ ಕುರಿತು ಜಿಲ್ಲಾಧಿಕಾರಿ ಸಭೆ

ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಿಸಿ, ಕಲ್ಯಾಣ ಕರ್ನಾಟಕ ಉತ್ಸವವನ್ನು ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಲಾಗುವುದು. ಕೊವಿಡ್ ಹಿನ್ನೆಲೆ ಸಮಾರಂಭವನ್ನು ಅತ್ಯಂತ ಸರಳವಾಗಿ ಆಚರಿಸಬೇಕು, ಕಾರ್ಯಕ್ರಮಕ್ಕೆ ಹೆಚ್ಚು ಜನರನ್ನು ಸೇರಿಸಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮದ ನೇರಪ್ರಸಾರ: ಕೊರೊನಾ ಭೀತಿ ಹಿನ್ನೆಲೆ ಕಾರ್ಯಕ್ರಮದಲ್ಲಿ ಹೆಚ್ಚು ಜನರನ್ನು ಸೇರಿಸಬಾರದೆಂಬ ನಿರ್ದೇಶನ ಇರುವ ಕಾರಣ ಹಾಗೂ ಕಾರ್ಯಕ್ರಮ ವೀಕ್ಷಿಸುವ ಸೌಭಾಗ್ಯ ಎಲ್ಲರಿಗೂ ದೊರಕುವಂತಾಬೇಕು ಎಂಬ ನಿಟ್ಟಿನಲ್ಲಿ ಫೇಸ್‍ಬುಕ್, ಯೂ ಟ್ಯೂಬ್ ಹಾಗೂ ಟಿವಿ ಚಾನಲ್‍ಗಳಲ್ಲಿ ನೇರಪ್ರಸಾರ ಮಾಡುವಂತೆ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.