ಸೇಡಂ: ಬ್ಲಾಕ್ ಕಾಂಗ್ರೆಸ್ ಕಮಿಟಿಯಿಂದ ಕಿಸಾನ್ ಮಜ್ದೂರ ಬಚಾವೋ ದಿವಸ್ ಆಚರಿಸಲಾಯಿತು. ಮಾಜಿ ಸಚಿವ, ಕೆಪಿಸಿಸಿ ಮಾಧ್ಯಮ ವಕ್ತಾರ ಡಾ. ಶರಣಪ್ರಕಾಶ ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿಯಿಂದ ಸಹಾಯ ಆಯುಕ್ತರ ಕಚೇರಿವರೆಗೆ ಪಾದಯಾತ್ರೆ ನಡೆಸಿದರು.
ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ರೈತ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳ ವಿರುದ್ಧ ಇದೇ ವೇಳೆ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯುದ್ದಕ್ಕೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ನಂತರ ಸಹಾಯಕ ಆಯುಕ್ತ ರಮೇಶ ಕೋಲಾರ ಅವರಿಗೆ ಮನವಿ ಸಲ್ಲಿಸಲಾಯಿತು.